
ಬಳ್ಳಾರಿ, 01 ಜೂನ್ (ಹಿ.ಸ.) :
ಆ್ಯಂಕರ್ : ನಗರದ ಹಿರೇಹಾಳ್ ಕುಡಂ, ಈದ್ಗಾ ರಸ್ತೆಯಲ್ಲಿರುವ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಖಾಲಿ ಇರುವ ಒಟ್ಟು 5 ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಶಾಲೆಯ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹುದ್ದೆಗಳ ವಿವರ:
ಪ್ರಥಮ ಭಾಷೆ ಇಂಗ್ಲೀಷ್-03 ಹುದ್ದೆಗಳು, ಕಲಾ ಇಂಗ್ಲೀಷ್-01 ಹುದ್ದೆ, ಕನ್ನಡ-01 ಹುದ್ದೆ.
ಈ ಶಾಲೆಯಲ್ಲಿ 6ನೇ ತರಗತಿಯಿಂದ 10ನೇ ತರಗತಿಯವರೆಗೆ ಒಟ್ಟು 432 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇದು ಸಂಪೂರ್ಣ ಇಂಗ್ಲೀಷ್ ಮಾಧ್ಯಮ ಶಾಲೆಯಾಗಿದೆ.
ಹೆಚ್ಚಿನ ಮಾಹಿತಿ ಹಾಗೂ ನೇಮಕಾತಿ ಪ್ರಕ್ರಿಯೆಗಾಗಿ ಆಸಕ್ತರು ಬಳ್ಳಾರಿಯ ಆದರ್ಶ ವಿದ್ಯಾಲಯದ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್