ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಕೊಪ್ಪಳ, 01 ಜೂನ್ (ಹಿ.ಸ.) : ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಕೊಪ್ಪಳ ಜಿಲ್ಲೆಯಲ್ಲಿ ನಡೆಸಲಾಗುತ್ತಿರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 2026-27ನೇ ಸಾಲಿನ ಹೊಸ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾ
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ


ಕೊಪ್ಪಳ, 01 ಜೂನ್ (ಹಿ.ಸ.) :

ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಕೊಪ್ಪಳ ಜಿಲ್ಲೆಯಲ್ಲಿ ನಡೆಸಲಾಗುತ್ತಿರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 2026-27ನೇ ಸಾಲಿನ ಹೊಸ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ (ಎಸ್ಸಿ), ಪರಿಶಿಷ್ಟ ಪಂಗಡ (ಎಸ್ಟಿ) ಹಾಗೂ ಇತರ ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು, ಪಿಯುಸಿ, ಸಮನಾಂತರ ಡಿಪೆÇ್ಲೀಮಾ ಮತ್ತು ಐಟಿಐ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿದ್ದರೆ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರವರ್ಗ-1, ಎಸ್ಸಿ ಹಾಗೂ ಎಸ್ಟಿ ವಿದ್ಯಾರ್ಥಿಗಳ ಪೆÇೀಷಕರ ವಾರ್ಷಿಕ ಆದಾಯ ಮಿತಿ 2.50 ಲಕ್ಷ ರೂ.ಗಳಾಗಿದ್ದು, ಪ್ರವರ್ಗ-2ಎ, 2ಬಿ, 3ಎ, 3ಬಿ ಹಾಗೂ ಇತರ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಪೆÇೀಷಕರ ವಾರ್ಷಿಕ ಆದಾಯ ಮಿತಿ 1 ಲಕ್ಷ ರೂ.ಗಳಾಗಿದೆ. ವಿದ್ಯಾರ್ಥಿಗಳು ಜೂನ್ 15 ರೊಳಗೆ ಇಲಾಖೆಯ ಅಧಿಕೃತ ತಂತ್ರಾಂಶ https://shp.karnataka.gov.in/bcwd ದ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ಮಾಹಿತಿ, ಪ್ರವೇಶ ಅರ್ಹತೆ, ಅಗತ್ಯ ದಾಖಲೆಗಳು ಹಾಗೂ ಸರ್ಕಾರದ ಆದೇಶಗಳ ವಿವರಗಳನ್ನು ಇಲಾಖೆಯ ವೆಬ್ಸೈಟ್ https://bcwd.karnataka.gov.in ನಲ್ಲಿ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ತಾಂತ್ರಿಕ ತೊಂದರೆಗಳು ಎದುರಾದಲ್ಲಿ ಇಲಾಖೆಯ ಇ-ಮೇಲ್ bcwdhelpline@gmail.com ಹಾಗೂ ಸಹಾಯವಾಣಿ ಸಂಖ್ಯೆ 8050770004 ಅನ್ನು ಸಂಪರ್ಕಿಸಬಹುದಾಗಿದ್ದು, ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಅಥವಾ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಿ ಮಾಹಿತಿ ಪಡೆಯಬಹುದು ಎಂದು ಕೊಪ್ಪಳ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande