ಆರ್.ಬಿ. ತಿಮ್ಮಾಪುರರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಆಗ್ರಹ
ಬಾಗಲಕೋಟೆ, 01 ಜೂನ್ (ಹಿ.ಸ.) : ಆಂಕರ್ : ರಾಜ್ಯದ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ಗರಿಗೆದರಿರುವ ನಡುವೆಯೇ, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ದಲಿತ ಸಮುದಾಯದ ಪ್ರಭಾವಿ ಮುಖಂಡ ಆರ್ ಬಿ ತಿಮ್ಮಾಪುರ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂಬ ಆಗ್ರಹ ಕೇಳಿಬಂದಿದೆ. ಅಹ
Deputy cm


ಬಾಗಲಕೋಟೆ, 01 ಜೂನ್ (ಹಿ.ಸ.) :

ಆಂಕರ್ : ರಾಜ್ಯದ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ಗರಿಗೆದರಿರುವ ನಡುವೆಯೇ, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ದಲಿತ ಸಮುದಾಯದ ಪ್ರಭಾವಿ ಮುಖಂಡ ಆರ್ ಬಿ ತಿಮ್ಮಾಪುರ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂಬ ಆಗ್ರಹ ಕೇಳಿಬಂದಿದೆ.

ಅಹಿಂದ ಮುಖಂಡ ರವಿ ರೊಡ್ಡಪ್ಪನವರ ಅವರು ಕಾಂಗ್ರೆಸ್ ಹೈಕಮಾಂಡ್ ಹಾಗೂ ಪಕ್ಷದ ಹಿರಿಯ ನಾಯಕರಿಗೆ ಮನವಿ ಸಲ್ಲಿಸಿ, ಆರ್.ಬಿ. ತಿಮ್ಮಾಪುರ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಪ್ರಬಲ ಖಾತೆಯೊಂದಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ. ಬಳಿಕ ಅವರು ಮಾತನಾಡಿ, ರಾಜ್ಯ ರಾಜಕಾರಣದಲ್ಲಿ ಆರ್.ಬಿ. ತಿಮ್ಮಾಪುರ ಅವರು ದೀರ್ಘಕಾಲದಿಂದ ಜನಪರ ಸೇವೆ ಸಲ್ಲಿಸುತ್ತಿದ್ದು, ವಿಶೇಷವಾಗಿ ದಲಿತರು, ಹಿಂದುಳಿದ ವರ್ಗಗಳು ಹಾಗೂ ಸಮಾಜದ ವಂಚಿತ ಸಮುದಾಯಗಳ ಪರವಾಗಿ ನಿರಂತರ ಹೋರಾಟ ನಡೆಸಿದ್ದಾರೆ ಎಂದು ಹೇಳಿದರು. ಪಕ್ಷದ ಸಂಘಟನೆ ಬಲಪಡಿಸುವಲ್ಲಿ ಹಾಗೂ ಕಾಂಗ್ರೆಸ್ ಪಕ್ಷವನ್ನು ಗ್ರಾಮೀಣ ಮಟ್ಟದಲ್ಲಿ ಗಟ್ಟಿಗೊಳಿಸುವಲ್ಲಿ ಅವರ ಕೊಡುಗೆ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟರು.

ದಲಿತ ಸಮುದಾಯಕ್ಕೆ ನ್ಯಾಯ ದೊರೆಯಲಿ :

ರಾಜ್ಯದ ರಾಜಕೀಯ ವ್ಯವಸ್ಥೆಯಲ್ಲಿ ಎಲ್ಲ ಸಮುದಾಯಗಳಿಗೆ ಸಮಾನ ಪ್ರಾತಿನಿಧ್ಯ ದೊರೆಯಬೇಕಿದ್ದು, ದಲಿತ ಸಮುದಾಯದ ಪ್ರಬಲ ನಾಯಕನಾಗಿ ಗುರುತಿಸಿಕೊಂಡಿರುವ ತಿಮ್ಮಾಪುರ ಅವರಿಗೆ ಉನ್ನತ ಸ್ಥಾನಮಾನ ನೀಡುವುದರಿಂದ ಸಮಾಜಕ್ಕೆ ಉತ್ತಮ ಸಂದೇಶ ರವಾನೆಯಾಗಲಿದೆ ಎಂದು ರವಿ ರೊಡ್ಡಪ್ಪನವರ ಹೇಳಿದರು.

ಸಚಿವ ಸಂಪುಟದಲ್ಲಿ ಕೇವಲ ಸ್ಥಾನ ನೀಡುವುದಷ್ಟೇ ಅಲ್ಲದೆ, ರಾಜ್ಯದ ಅಭಿವೃದ್ಧಿಗೆ ನೇರವಾಗಿ ಸಂಬಂಧಿಸಿದ ಪ್ರಭಾವಿ ಖಾತೆಯನ್ನು ನೀಡುವ ಮೂಲಕ ಅವರ ಅನುಭವ ಮತ್ತು ಆಡಳಿತಾತ್ಮಕ ಸಾಮರ್ಥ್ಯವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ಅಹಿಂದ ಸಮುದಾಯಗಳ ನಿರೀಕ್ಷೆ

ಅಹಿಂದ (ಅಲ್ಪಸಂಖ್ಯಾತರು, ಹಿಂದುಳಿದವರು ಮತ್ತು ದಲಿತರು) ಸಮುದಾಯಗಳ ಪರವಾಗಿ ಧ್ವನಿಯಾಗಿರುವ ಆರ್.ಬಿ. ತಿಮ್ಮಾಪುರ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಿದರೆ ಆ ವರ್ಗಗಳ ಆಶೋತ್ತರಗಳಿಗೆ ಮತ್ತಷ್ಟು ಬಲ ಸಿಗಲಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

ರಾಜ್ಯದ ವಿವಿಧ ಭಾಗಗಳಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಕೂಡ ತಿಮ್ಮಾಪುರ ಅವರಿಗೆ ಸಚಿವ ಸಂಪುಟದಲ್ಲಿ ಮಹತ್ವದ ಸ್ಥಾನ ಸಿಗಬೇಕು ಎಂದು ನಿರೀಕ್ಷಿಸುತ್ತಿದ್ದಾರೆ. ಅವರ ಅನುಭವ, ಸಂಘಟನಾ ಸಾಮರ್ಥ್ಯ ಹಾಗೂ ಜನಪರ ಕಾರ್ಯಗಳನ್ನು ಪರಿಗಣಿಸಿ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಹೈಕಮಾಂಡ್ ನಿರ್ಧಾರದತ್ತ ಎಲ್ಲರ ಚಿತ್ತ

ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದು, ಆರ್.ಬಿ. ತಿಮ್ಮಾಪುರ ಅವರಿಗೆ ಯಾವ ಮಟ್ಟದ ಜವಾಬ್ದಾರಿ ಸಿಗಲಿದೆ ಎಂಬುದರ ಬಗ್ಗೆ ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಾಗಿದೆ. ಉಪಮುಖ್ಯಮಂತ್ರಿ ಹುದ್ದೆಯ ಜೊತೆಗೆ ಪ್ರಬಲ ಖಾತೆ ನೀಡುವ ಬೇಡಿಕೆ ಎಷ್ಟು ಮಟ್ಟಿಗೆ ಪರಿಗಣನೆಗೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande