ಕೊಪ್ಪಳ : ಜೂನ್, ಜುಲೈ ತಿಂಗಳಲ್ಲಿ ಮೀನುಗಾರಿಕೆ ನಿಷೇಧ
ಕೊಪ್ಪಳ, 01 ಜೂನ್ (ಹಿ.ಸ.) : ಆ್ಯಂಕರ್ : ಕೊಪ್ಪಳ ಜಿಲ್ಲೆಯ ಕೊಪ್ಪಳ, ಕುಕನೂರು ಹಾಗೂ ಯಲಬುರ್ಗಾ ತಾಲೂಕುಗಳ ಮೀನುಗಾರರಿಗೆ ಜೂನ್ ಮತ್ತು ಜುಲೈ ತಿಂಗಳಲ್ಲಿ ಮೀನು ಹಿಡಿಯುವುದನ್ನು ನಿಷೇಧಿಸಲಾಗಿದೆ ಎಂದು ಕೊಪ್ಪಳ ಮೀನುಗಾರಿಕೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. 2026-27 ನೇ ಸಾಲಿನಲ್ಲಿ ಜೂನ್ 1 ರಿ
ಕೊಪ್ಪಳ : ಜೂನ್, ಜುಲೈ ತಿಂಗಳಲ್ಲಿ ಮೀನುಗಾರಿಕೆ ನಿಷೇಧ


ಕೊಪ್ಪಳ, 01 ಜೂನ್ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲೆಯ ಕೊಪ್ಪಳ, ಕುಕನೂರು ಹಾಗೂ ಯಲಬುರ್ಗಾ ತಾಲೂಕುಗಳ ಮೀನುಗಾರರಿಗೆ ಜೂನ್ ಮತ್ತು ಜುಲೈ ತಿಂಗಳಲ್ಲಿ ಮೀನು ಹಿಡಿಯುವುದನ್ನು ನಿಷೇಧಿಸಲಾಗಿದೆ ಎಂದು ಕೊಪ್ಪಳ ಮೀನುಗಾರಿಕೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

2026-27 ನೇ ಸಾಲಿನಲ್ಲಿ ಜೂನ್ 1 ರಿಂದ ಜುಲೈ 31 ವರೆಗೆ ಮುಂಗಾರು ಮಳೆಗಾಲದ ಅವಧಿ ಇರುವುದರಿಂದ ಎಲ್ಲ ಸರ್ವಋತು ಕೆರೆಗಳು, ಜಲಾಶಯಗಳು ಮತ್ತು ನದಿ ಭಾಗದಲ್ಲಿ ಮೀನು ಹಿಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಒಂದು ವೇಳೆ ನಿಷೇಧ ಉಲ್ಲಂಘನೆ ಮಾಡಿದಲ್ಲಿ ಅಂತಹವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande