
ಹಾಸನ, 01 ಜೂನ್ (ಹಿ.ಸ.) :
ಆ್ಯಂಕರ್ : ಗ್ರಾಮೀಣ ಭಾಗದಲ್ಲಿರುವ ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿಗೆ ಹೆಚ್ಚಿನ ಒತ್ತು ನೀಡುವುದರ ಜೊತೆಗೆ ಉತ್ತಮ ಶಿಕ್ಷಣ ಒದಗಿಸಲು ಶಾಸಕರಾದ ಸ್ವರೂಪ ಪ್ರಕಾಶ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಹಾಸನದ ಹರಳಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿಂದು ನಡೆದ ಜಿಲ್ಲಾ ಮಟ್ಟದ 2026-27 ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮಕ್ಕಳ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಹಾರೈಸಿದರು.
ದಾಸರು ಕೊಪ್ಪಲು ಮತ್ತು ಹರಳಹಳ್ಳಿ ಶಾಲೆಯ ಶಿಕ್ಷಕರು ಬದ್ಧತೆಯಿಂದ ಕೆಲಸ ನಿರ್ವಹಿಸುತ್ತಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆ ಗು ಒತ್ತು ನೀಡಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.
ಸದರಿ ಶಾಲೆಯನ್ನು ಕೆ.ಪಿ.ಎಸ್.ಶಾಲೆಗೆ ಆಯ್ಕೆ ಮಾಡಿದ್ದು, ಮಕ್ಕಳಿಗೆ ಮುಂದಿನ ದಿನಗಳಲ್ಲಿ ಪಿ.ಯು.ಸಿ.ವರೆಗೆ ಶಿಕ್ಷಣ ದೊರೆಯಲಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಜಿಲ್ಲೆ ಹಾಗೂ ರಾಜ್ಯಾದ್ಯಂತ ಇಂದು ಅತ್ಯಂತ ಸಂತೋಷ,ಸAಭ್ರಮ ಮತ್ತು ಸಡಗರದಿಂದ ಶಾಲಾ ಪ್ರಾರಂಭೋತ್ಸವ ನಡೆಯತ್ತಿದೆ ಮಕ್ಕಳ ಸಂಪೂರ್ಣ ಬೆಳವಣಿಗೆಗೆ ಪೂರಕವಾಗಿ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರಿ ಶಾಲೆಗಳ ಗುರಿಯಾಗಿದೆ ಎಂದು ತಿಳಿಸಿದರು.
ಮಕ್ಕಳು ಪ್ರತಿದಿನ ಕಠಿಣ ಪರಿಶ್ರಮ ಹಾಕಿ ಏಕಾಗ್ರತೆಯಿಂದ ಕಲಿಯುವಂತೆ ತಿಳಿಸಿದರು. ಸರ್ಕಾರಿ ಶಾಲೆಗಳ ಮಕ್ಕಳ ಭವಿಷ್ಯ ಉಜ್ವಲವಾಗಲು ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರು ಹೆಚ್ಚಿನ ಕಾಳಜಿ ವಹಿಸುವಂತೆ ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.