
ಬಳ್ಳಾರಿ, 01 ಜೂನ್ (ಹಿ.ಸ.) :
ಆ್ಯಂಕರ್ : ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ಎಸ್ಸಿ/ಎಸ್ಟಿ ನೌಕರರ ಕಲ್ಯಾಣ ಸಂಘ (ಕರ್ನಾಟಕ) ವತಿಯಿಂದ ಜೂನ್ 13 ರಂದು ಬಳ್ಳಾರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ’ ಹಾಗೂ ಬಹುಮಾನ ವಿತರಣಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಬಳ್ಳಾರಿ ಜಿಲ್ಲೆಯ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇ.85 ಕ್ಕಿಂತಲೂ ಅಧಿಕ ಅಂಕ ಗಳಿಸಿ ತೇರ್ಗಡೆಯಾಗಿರುವ ಎಸ್ಸಿ/ಎಸ್ಟಿ ಸಮುದಾಯದ ಟಾಪರ್ ವಿದ್ಯಾರ್ಥಿಗಳನ್ನು ಗುರುತಿಸಿ ಈ ಪುರಸ್ಕಾರ ನೀಡಲು ಸಂಘವು ಉದ್ದೇಶಿಸಿದೆ. ಜಿಲ್ಲೆಯ ಅರ್ಹ ವಿದ್ಯಾರ್ಥಿಗಳು ತಮ್ಮ ಸ್ವ-ವಿವರಗಳೊಂದಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.
ಅಗತ್ಯವಿರುವ ದಾಖಲೆಗಳು:
ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ ಹಾಗೂ ಮೊಬೈಲ್ ಸಂಖ್ಯೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 5.
ದಾಖಲೆಗಳನ್ನು ಕಳುಹಿಸಬೇಕಾದ ವಿಳಾಸ:
ಶಿವರಾಜ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಗಾಂಧಿನಗರ ಶಾಖೆ,
1ನೇ ಕ್ರಾಸ್, ಮಹಿಳಾ ಕಾಲೇಜು ರಸ್ತೆ, ಗಾಂಧಿನಗರ, ಬಳ್ಳಾರಿ - 583101.
ಹೆಚ್ಚಿನ ಮಾಹಿತಿಗಾಗಿ ಶಿವರಾಜ್ ಮೊ.9901938360, ವೆಂಕಟೇಶ್ ಮೊ.7892058358 ಗೆ ಸಂಪರ್ಕಿಸಬಹುದಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಡಿ.ವಿಜಯಕುಮಾರ್ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್