ಸಿದ್ದರಾಮಯ್ಯ, ಡಿಕೆಶಿ ದೆಹಲಿಗೆ ಪ್ರಯಾಣ
ಬೆಂಗಳೂರು, 01 ಜೂನ್ (ಹಿ.ಸ.) : ಆ್ಯಂಕರ್ : ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ವರಿಷ್ಠರೊಂದಿಗೆ ಚರ್ಚಿಸಲು ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೋಮವಾರ ಒಟ್ಟಿಗೆ ವಿಶೇಷ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದರು. ಕಾಂಗ್ರೆಸ್ ಹೈಕಮಾಂಡ್ನೊಂ
ಸಿದ್ದರಾಮಯ್ಯ, ಡಿಕೆಶಿ ದೆಹಲಿಗೆ ಪ್ರಯಾಣ


ಬೆಂಗಳೂರು, 01 ಜೂನ್ (ಹಿ.ಸ.) :

ಆ್ಯಂಕರ್ : ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ವರಿಷ್ಠರೊಂದಿಗೆ ಚರ್ಚಿಸಲು ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೋಮವಾರ ಒಟ್ಟಿಗೆ ವಿಶೇಷ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದರು.

ಕಾಂಗ್ರೆಸ್ ಹೈಕಮಾಂಡ್ನೊಂದಿಗೆ ನಡೆಯಲಿರುವ ಮಹತ್ವದ ಸಭೆಗಳಲ್ಲಿ ಅಧಿಕಾರ ಹಂಚಿಕೆ, ಸಚಿವ ಸಂಪುಟ ರಚನೆ ಹಾಗೂ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಸಮಗ್ರ ಚರ್ಚೆ ನಡೆಯುವ ನಿರೀಕ್ಷೆಯಿದೆ.

ರಾಜ್ಯದ ಮುಂದಿನ ರಾಜಕೀಯ ದಿಕ್ಕನ್ನು ನಿರ್ಧರಿಸುವಲ್ಲಿ ಈ ಸಭೆಗಳು ನಿರ್ಣಾಯಕವಾಗಲಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ, ಹಿರಿಯ ಕಾಂಗ್ರೆಸ್ ನಾಯಕ ಎಚ್.ಸಿ. ಮಹದೇವಪ್ಪ ಸೇರಿದಂತೆ ಹಲವು ಪ್ರಮುಖ ಮುಖಂಡರು ಸಹ ಈ ಸಂದರ್ಭದಲ್ಲಿ ದೆಹಲಿಗೆ ತೆರಳಿದ್ದಾರೆ.

ದೆಹಲಿ ಭೇಟಿಯ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕ ಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಚರ್ಚೆಗಳು ನಡೆಯಲಿವೆ ಎಂದು ತಿಳಿದು ಬಂದಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande