ಎಮ್ಮಿಗನೂರು ಗ್ರಾಮದ ಯುವತಿ ಕಾಣೆ
ಕಂಪ್ಲಿ, 01 ಜೂನ್ (ಹಿ.ಸ.) : ಆ್ಯಂಕರ್ : ಕಂಪ್ಲಿ ತಾಲ್ಲೂಕಿನ ಎಮ್ಮಿಗನೂರು ಗ್ರಾಮದ 6 ನೇ ವಾರ್ಡ್ ಇಂದಿರಾನಗರ ಜಡೆಮ್ಮ (21) ಏ.12 ರಂದು ಕಾಣೆಯಾಗಿದ್ದು ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಸಬ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ. ಯುವತಿಯ ಚಹರೆ: ಎತ್ತರ 4.5 ಅಡಿ, ಸ
Young woman from Emmiganur village missing


ಕಂಪ್ಲಿ, 01 ಜೂನ್ (ಹಿ.ಸ.) :

ಆ್ಯಂಕರ್ : ಕಂಪ್ಲಿ ತಾಲ್ಲೂಕಿನ ಎಮ್ಮಿಗನೂರು ಗ್ರಾಮದ 6 ನೇ ವಾರ್ಡ್ ಇಂದಿರಾನಗರ ಜಡೆಮ್ಮ (21) ಏ.12 ರಂದು ಕಾಣೆಯಾಗಿದ್ದು ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಸಬ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ.

ಯುವತಿಯ ಚಹರೆ: ಎತ್ತರ 4.5 ಅಡಿ, ಸಾಧಾರಣ ಮೈಕಟ್ಟು, ಗೋಧಿ ಮೈ ಬಣ್ಣ, ದುಂಡು ಮುಖ ಹೊಂದಿದ್ದು, ಮನೆಯಿಂದ ಹೊರಡುವಾಗ ಹಸಿರು ಬಣ್ಣದ ಚೂಡಿದಾರ ಧರಿಸಿರುತ್ತಾರೆ. ಕನ್ನಡ, ಇಂಗ್ಲೀಷ್ ಭಾಷೆ, ಮಾತನಾಡುತ್ತಾಳೆ.

ಕಾಣೆಯಾದ ಯುವತಿಯ ಬಗ್ಗೆ ಯಾವುದೇ ಮಾಹಿತಿ ಸಿಕ್ಕಲ್ಲಿ ಕುರುಗೋಡು ಪೊಲೀಸ್ ಠಾಣೆಯ ದೂ.08392-263433, ಮೊ.9480803051, 9480803039, ಬಳ್ಳಾರಿ ಎಸ್.ಪಿ ಕಚೇರಿ ದೂ.08392-258400 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande