ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ಜಾಗೃತಿ : ಡಾ. ಸುರೇಶ ಇಟ್ನಾಳ
ಕೊಪ್ಪಳ, 10 ಜೂನ್ (ಹಿ.ಸ.) : ಆ್ಯಂಕರ್ : ಸರ್ಕಾರದ ಇತರೆ ಸಂಬಂಧಿತ ಎಲ್ಲಾ ಇಲಾಖೆಗಳ ಸಹಕಾರದೊಂದಿಗೆ ಜಿಲ್ಲೆಯಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ವಿರುದ್ಧ ಬಲವಾದ ಜನಾಭಿಪ್ರಾಯ ರೂಪುಗೊಳ್ಳುವಂತೆ, ಧನಾತ್ಮಕ ಪರಿಣಾಮ ಬೀರುವ ಹಾಗೂ ಸಾಮಾಜಿಕ ಸಮಸ್ಯೆ ನಿವಾರಣೆಯಾಗುವಂತೆ ಕಾರ್ಯಕ್ರಮವನ್ನು ಆಯೋಜಿಸ
ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ಜಾಗೃತಿ : ಡಾ. ಸುರೇಶ ಇಟ್ನಾಳ


ಕೊಪ್ಪಳ, 10 ಜೂನ್ (ಹಿ.ಸ.) :

ಆ್ಯಂಕರ್ : ಸರ್ಕಾರದ ಇತರೆ ಸಂಬಂಧಿತ ಎಲ್ಲಾ ಇಲಾಖೆಗಳ ಸಹಕಾರದೊಂದಿಗೆ ಜಿಲ್ಲೆಯಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ವಿರುದ್ಧ ಬಲವಾದ ಜನಾಭಿಪ್ರಾಯ ರೂಪುಗೊಳ್ಳುವಂತೆ, ಧನಾತ್ಮಕ ಪರಿಣಾಮ ಬೀರುವ ಹಾಗೂ ಸಾಮಾಜಿಕ ಸಮಸ್ಯೆ ನಿವಾರಣೆಯಾಗುವಂತೆ ಕಾರ್ಯಕ್ರಮವನ್ನು ಆಯೋಜಿಸಬೇಕೆಂದು ಜಿಲ್ಲಾಧಿಕಾರಿಗಳು ಹಾಗೂ ಕೊಪ್ಪಳ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಅಧ್ಯಕ್ಷರಾದ ಡಾ. ಸುರೇಶ ಬಿ. ಇಟ್ನಾಳ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು (ಐ.ಎಲ್.ಓ) 2002 ರಲ್ಲಿ ಜೂನ್ 12ನೇ ದಿನವನ್ನು ವಿಶ್ವ ಬಾಲಕಾರ್ಮಿಕ ದಿನ ಎಂದು ಘೋಷಣೆ ಮಾಡಿರುತ್ತದೆ. ಅಂದಿನಿಂದ ವಿಶ್ವ ಸಂಸ್ಥೆಯ ಎಲ್ಲಾ ಮಿತ್ರ ರಾಷ್ಟ್ರಗಳು ಪ್ರತಿ ವರ್ಷ ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ವಿರೋಧಿ ದಿನವನ್ನು ಆಯೋಜಿಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ, ರಾಜ್ಯಾದ್ಯಂತ ಸರ್ಕಾರದ ಎಲ್ಲಾ ಇಲಾಖೆ, ನಿಗಮ, ಮಡಳಿ, ಪ್ರಾಧಿಕಾರ, ಸಂಸ್ಥೆ, ನಿರ್ದೇಶನಾಲಯ ಶಾಲಾ ಕಾಲೇಜು, ಕಛೇರಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರುಗಳಿಗೆ 12ನೇ ಜೂನ್ 2026ರಂದು ಬಾಲ ಹಾಗೂ ಕಿಶೋರ ಕಾರ್ಮಿಕರಿಂದ ದುಡಿಮೆಯನ್ನು ಬಯಸುವುದಿಲ್ಲವೆಂಬ ಪ್ರಮಾಣ ವಚನ ಸ್ವೀಕರಿಸಲು ಕ್ರಮ ವಹಿಸಬೇಕಾಗಿದೆ.

ಸರ್ಕಾರದ ಎಲ್ಲಾ ಇಲಾಖೆಗಳ ಸಹಕಾರದೊಂದಿಗೆ, ಅರ್ಥವತ್ತಾದ ಕಾರ್ಯಕ್ರಮ ಹಾಗೂ ಚಟುವಟಿಕೆಗಳನ್ನು ಹಮ್ಮಿಕೊಂಡು, ಕಾರ್ಯಕ್ರಮದಲ್ಲಿ ಚುನಾಯಿತ ಜನಪ್ರತಿನಿಧಿಗಳು, ಕಾನೂನು ಸೇವೆಗಳ ಪ್ರಾಧಿಕಾರ, ಸರ್ಕಾರೇತರ ಸಂಸ್ಥೆಗಳು, ಸ್ವಸಹಾಯ ಸಂಘಗಳು, ಕಾರ್ಮಿಕ ಸಂಘಗಳು, ಉದ್ಯೋಗದಾತರ ಸಂಘಗಳು, ಮತ್ತು ಬಾಲಕಾರ್ಮಿಕ ಪದ್ಧತಿ ವಿರುದ್ಧ ಆಂದೋಲನ ನಡೆಸುತ್ತಿರುವ ಎಲ್ಲಾ ಇತರೆ ಸಂಘ ಸಂಸ್ಥೆಗಳು ಹಾಗೂ ಸಾಮಾಜಿಕ ಕಾರ್ಯಕರ್ತರುಗಳನ್ನು ಆಹ್ವಾನಿಸಿ, ಜಿಲ್ಲೆಯಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ವಿರುದ್ಧ ಬಲವಾದ ಜನಾಭಿಪ್ರಾಯ ರೂಪುಗೊಳ್ಳುವಂತೆ, ಋಣಾತ್ಮಾಕ ಪರಿಣಾಮ ಬೀರುವ ಹಾಗೂ ಸಾಮಾಜಿಕ ಸಮಸ್ಯೆಯ ನಿವಾರಣೆಯಾಗುವಂತೆ ಮುಂದಿನ ಎಲ್ಲಾ ಕ್ರಮಗಳನ್ನು ಸರ್ಕಾರದ ಶಿಷ್ಟಾಚಾರದನ್ವಯ ಕೈಗೊಳ್ಳಬೇಕು.

ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿ ಆಯಾ ಗ್ರಾಮ ಪಂಚಾಯತಿ ವತಿಯಿಂದ ಜೂನ್ 12 ರಂದು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ವಿರೋಧಿ ಪದ್ಧತಿಯ ಕುರಿತು ಡಂಗೂರವನ್ನು ಸಾರಿಸಬೇಕು.

ಪ್ರತಿ ಗ್ರಾಮ, ತಾಲೂಕು ಹಾಗೂ ಜಿಲ್ಲೆಗಳಲ್ಲಿ ಶಾಲಾ-ಕಾಲೇಜು ಎನ್.ಸಿ.ಸಿ ಹಾಗೂ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಜಾಥಾ ಕಾರ್ಯಕ್ರಮವನ್ನು ಆಯೋಜಿಸಬೇಕು.

ಜಾಥಾ ಕಾರ್ಯಕ್ರಮದಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕ ವಿರೊಧಿ ಪದ್ಧತಿ ಕುರಿತು ಘೋಷಣೆಗಳನ್ನು ಕೂಗಿಸುವುದರ ಮೂಲಕ ಅರಿವು ಮೂಡಿಸಬೇಕು.

ಬಾಲಕಾರ್ಮಿಕ ವಿರೋಧಿ ದಿನದ ಕುರಿತು ಪ್ರಾಥಮಿಕ, ಪ್ರೌಢಶಾಲಾ ಮಕ್ಕಳಿಗೆ, ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ, ಕಥಾ, ಭಾಷಣ, ಚರ್ಚಾ ಸ್ಪರ್ಧೆ, ಚಿತ್ರಕಲೆ, ರಸ ಪ್ರಶ್ನೆ ಕಾರ್ಯಕ್ರಮ ಮತ್ತು ಮಕ್ಕಳಿಂದ ನಾಟಕ ಪ್ರದರ್ಶನಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕ್ರಮ ವಹಿಸಬೇಕು.

ಇದಲ್ಲದೇ ಜಿಲ್ಲೆಯಾದ್ಯಂತ ಜೂನ್ 13 ರಿಂದ ಜೂ. 30ರ ವರೆಗೆ ಬಾಲ ಹಾಗೂ ಕಿಶೋರ ಕಾರ್ಮಿಕರ ರಕ್ಷಣಾ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಬೇಕು.

ಜೂ. 12 ರಂದು ಎಲ್ಲಾ ಗ್ರಾಮ ಪಂಚಾಯತಿ, ಪುರಸಭೆ ಹಾಗೂ ನಗರಸಭೆ ವತಿಯಿಂದ ಕಸ ವಿಲೇವಾರಿ ವಾಹನಗಳಲ್ಲಿ ಉಚಿತವಾಗಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ವಿರೋಧಿ ಪದ್ಧತಿಯ ಕುರಿತು ಘೋಷಣೆಗಳನ್ನು ಕೂಗಿಸುವ ಮೂಲಕ ಅರಿವು ಮೂಡಿಸಬೇಕೆಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande