
ನವದೆಹಲಿ, 10 ಜೂನ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ನವದೆಹಲಿಯ 10, ಜನಪತ್ ನಿವಾಸದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ, ಲೋಕಸಭೆಯ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿದರು.
ಭೇಟಿಯ ಸಂದರ್ಭದಲ್ಲಿ ರಾಜ್ಯದ ರಾಜಕೀಯ ವಿದ್ಯಮಾನಗಳು, ಸರ್ಕಾರದ ಆಡಳಿತಾತ್ಮಕ ವಿಷಯಗಳು ಹಾಗೂ ಪಕ್ಷದ ಸಂಘಟನೆಗೆ ಸಂಬಂಧಿಸಿದ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನಡೆದ ಈ ಸಭೆ ಕಾಂಗ್ರೆಸ್ ವಲಯದಲ್ಲಿ ಮಹತ್ವ ಪಡೆದುಕೊಂಡಿದೆ. ರಾಜ್ಯದಲ್ಲಿ ಪಕ್ಷದ ಮುಂದಿನ ಕಾರ್ಯಕ್ರಮಗಳು, ರಾಜಕೀಯ ಕಾರ್ಯತಂತ್ರಗಳು ಹಾಗೂ ಸಂಘಟನಾ ಚಟುವಟಿಕೆಗಳ ಕುರಿತು ವರಿಷ್ಠ ನಾಯಕರ ಮಾರ್ಗದರ್ಶನವನ್ನು ಮುಖ್ಯಮಂತ್ರಿ ಪಡೆದಿದ್ದಾರೆ ಎನ್ನಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.