ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಈಶ್ವರ ಖಂಡ್ರೆ
ಬೆಂಗಳೂರು, 10 ಜೂನ್ (ಹಿ.ಸ.) : ಆ್ಯಂಕರ್ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಈಶ್ವರ ಖಂಡ್ರೆ ರವರು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಪಂಚಾಯತ
Khandre reviewed the progress


ಬೆಂಗಳೂರು, 10 ಜೂನ್ (ಹಿ.ಸ.) :

ಆ್ಯಂಕರ್ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಈಶ್ವರ ಖಂಡ್ರೆ ರವರು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಸಭೆಯಲ್ಲಿ ಪಂಚಾಯತಿಗಳು ಗ್ರಾಮೀಣ ಜನತೆಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವುದು, ಗ್ರಾಮೀಣ ಭಾಗಗಳಲ್ಲಿ ಗುಣಮಟ್ಟದ ರಸ್ತೆ ಸಂಪರ್ಕ ಕಲ್ಪಿಸುವುದು, ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವುದು, ಸರ್ಕಾರಿ ಆಸ್ತಿಗಳ ಸಮರ್ಪಕ ಸಂರಕ್ಷಣೆ ಹಾಗೂ ಇ-ಸ್ವತ್ತು ತಂತ್ರಾಂಶದ ಪರಿಣಾಮಕಾರಿ ಅನುಷ್ಠಾನ ಹಾಗೂ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಸರ್ಕಾರದ ಕಾರ್ಯದರ್ಶಿಗಳಾದ ಸಮೀರ್ ಶುಕ್ಲಾ ಮತ್ತು ರಂದೀಪ್. ಡಿ, (ಪಂ.ರಾಜ್.) ಪಂಚಾಯತ್ ರಾಜ್ ಆಯುಕ್ತರಾದ ಡಾ|| ಅರುಧಂತಿ ಚಂದ್ರಶೇಖರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಯುಕ್ತರಾದ ಶ್ರೀಮತಿ ಬಿ. ಫೌಜಿಯಾ ತರನ್ನುಮ್, ನಿರ್ದೇಶಕರು ಇ- ಆಡಳಿತ ರಾಹುಲ್ ರತ್ನಂ ಪಾಂಡೆ, ಕರ್ನಾಟಕ ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ರಾಜೇಶ್ ಗೌಡ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande