
ಗದಗ, 10 ಜೂನ್ (ಹಿ.ಸ.) :
ಆ್ಯಂಕರ್ : ಜಾಗತಿಕ ಬಿಕ್ಕಟ್ಟಿನಿಂದ ಭಾರತಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನಡೆಸುವಂತ ಶಕ್ತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾತ್ರ ಇದೆ. ಅದನ್ನು ಕಳೆದ ಮೂರ್ನಾಲ್ಕು ತಿಂಗಳಲ್ಲಿ ತೋರಿಸಿದ್ದಾರೆ. 2047 ರಲ್ಲಿ ಆತ್ಮನಿರ್ಭರ ಭಾರತ, ವಿಕಸಿತ ಭಾರತ ಆಗಲು ನರೇಂದ್ರ ಮೋದಿಯವರ ಅವಶ್ಯಕತೆ ಬಹಳ ಇದೆ. ಅವರಿಗೆ ಜನ ಸೇವೆ ಮಾಡುವ ಶಕ್ತಿ, ಆರೋಗ್ಯ ಆಯಸ್ಸು ಕೊಡಲಿ, ದೇಶದ ಸೇವೆಯನ್ನು ಇನ್ನಷ್ಟು ದಿನ ಮಾಡಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಗದಗ ನಗರದ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಭಾರತದ ಹೆಮ್ಮೆಯ ಪ್ರಧಾನ ಮಂತ್ರಿಗಳಾಗಿ 4399 ದಿನಗಳ ಆಡಳಿತದ ಐತಿಹಾಸಿಕ ಮೈಲುಗಲ್ಲು ಸ್ಥಾಪಿಸಿದ ಭಾರತದ ಹೆಮ್ಮೆಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ಅತಿ ದೀರ್ಘಾವಧಿ ಚುನಾಯಿತ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಏರ್ಪಡಿಸಿದ್ದ ವಿಶೇಷ ಪೂಜೆ ಸಲ್ಲಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.
ನಮ್ಮ ನೆಚ್ಚಿನ ಪ್ರಧಾನಮಂತ್ರಿ ದೇಶ ಕಂಡ ಅಪ್ರತಿಮ ನಾಯಕರು. ಸುದೀರ್ಘವಾದ ರಾಜಕೀಯ ಜೀವನದಲ್ಲಿ ಭಾರತದ ಪ್ರಧಾನಮಂತ್ರಿ ಯಾಗಿ 12 ವರ್ಷ ಪೂರೈಸಿದ್ದಾರೆ. ಅಷ್ಟೇ ಅಲ್ಲ ಅತಿ ಹೆಚ್ಚು ಅವಧಿಗೆ ಚುನಾಯಿತ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ ಎನ್ನುವ ದಾಖಲೆ ಮಾಡಿದ್ದಾರೆ.
ಇವತ್ತಿನ ಆಧುನಿಕ ಕಾಲದಲ್ಲಿ ಇಷ್ಟೊಂದು ಜನಜಾಗೃತಿಯಾಗಿರುವ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದಿಂದ ಹಿಡಿದು ಮಾಧ್ಯಮಗಳು ಎಲ್ಲವರೀತಿಯ ಸುದ್ದಿಗಳನ್ನು ಕೊಡುವಲ್ಲಿ ಮುಂದಿರುವ ಈ ಸಂದರ್ಭದಲ್ಲಿ ಜನಪ್ರೀಯತೆ ಉಳಿಸಿಕೊಳ್ಳಲು ಜನರ ಪರ ರಾಜಕಾರಣ ಮಾಡಿ ಜನರ ಹಿತಕ್ಕಾಗಿ ದಿನಕ್ಕೆ 18 ತಾಸು ಕೆಲಸ ಮಾಡಿದ್ದಾರೆ. ನಿಂರತರ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಅವರು ಮಾಡಿರುವ ಹಲವಾರು ಯೋಜನೆಗಳು ಭಾರತವನ್ನು ವಿಶ್ವದಲ್ಲಿಯೇ ಮೂರನೇ ಆರ್ಥಿಕ ಶಕ್ತಿಯಾಗಿ ತೆಗೆದುಕೊಂಡು ಹೋಗಿದೆ. ಭಾರತದ ಅಭಿವೃದ್ಧಿ ಯಲ್ಲಿ ಅತ್ಯಂತ ಕೆಳ ವರ್ಗದವರೂ ಕೂಡ ಅದರ ಲಾಭ ಮುಟುವಂತೆ ಮಾಡಿದ್ದಾರೆ. ಅದಕ್ಕಾಗಿಯೇ ಪ್ರಥಮವಾಗಿ 25 ಕೋಟಿ ಜನರು ಬಡತನದಿಂದ ಮೇಲೆತ್ತುವ ಕಾರ್ಯವಾಗಿದೆ. ಬಡವರಿಗೆ ಮನೆಗಳನ್ನು ನೀಡುವ ಮುಖಾಂತರ ಆರೋಗ್ಯ ವಿಮೆ, ಶಿಕ್ಷಣ, ಉದ್ಯೋಗ ಕೊಡುವ ಮುಖಾಂತರ ಅವರು ಮೂರು ಕೆಲಸಗಳನ್ನು ಬಹಳ ಸ್ಪಷ್ಟವಾಗಿ ಮಾಡಿದ್ದಾರೆ. ಜನಸಾಮಾನ್ಯರು, ಬಡವರು, ದೀನದಲಿತರಿಗೆ, ಹೆಣ್ಣು ಮಕ್ಕಳಿಗೆ ಮತ್ತು ಯುವಕರಿಗೆ, ಶಿಕ್ಷಣ, ಉದ್ಯೋಗ, ಸಬಲೀಕರಣ ಮೂರನ್ನು ಕೊಟ್ಟಿರುವ ಧೀಮಂತ ನಾಯಕ ನರೇಂದ್ರ ಮೋದಿ ಎಂದು ಹೇಳಿದರು.
ಇವತ್ತು ನಾವು ಯಾಕೆ ದೇವರಲ್ಲಿ ಪ್ರಾರ್ಥನೆ ಮಾಡುತ್ತಿದ್ದೇವೆ ಎಂದರೆ ಜಗತ್ತು ಅತ್ಯಂತ ಸಂಕೀರ್ಣ ಕಾಲದಲ್ಲಿದೆ. ಜಾಗತಿಕ ಬಿಕ್ಕಟ್ಟಿದೆ. ಜಾಗತಿಕ ಬಿಕ್ಕಟ್ಟಿನಿಂದ ಭಾರತಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನಡೆಸುವಂತ ಶಕ್ತಿ ನರೇಂದ್ರ ಮೋದಿಯವರಿಗೆ ಮಾತ್ರ ಇದೆ ಅದನ್ನು ಕಳೆದ ಮೂರ್ನಾಲ್ಕು ತಿಂಗಳಲ್ಲಿ ತೋರಿಸಿದ್ದಾರೆ. ಅವರ ಅವಶ್ಯಕತೆ ಬಹಳ ಇದೆ. ಭಾರತದ ಈ ಮುನ್ನಡೆ ದಾಪುಗಾಲನ್ನು ಹಾಕಿ 2047 ರಲ್ಲಿ ಆತ್ಮನಿರ್ಭರ ಭಾರತ, ವಿಕಸಿತ ಭಾರತ ಆಗಲು ನರೇಂದ್ರ ಮೋದಿಯವರ ಅವಶ್ಯಕತೆ ಬಹಳ ಇದೆ. ಹೀಗಾಗಿ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇವೆ. ಅವರಿಗೆ ಜನ ಸೇವೆ ಮಾಡುವ ಶಕ್ತಿ, ಆರೋಗ್ಯ ಆಯಸ್ಸು ಕೊಡಲಿ, ದೇಶದ ಸೇವೆಯನ್ನು ಇನ್ನಷ್ಟು ದಿನ ಮಾಡಲಿ ಆ ಸೇವೆಯನ್ನು ಜನರು ಪ್ರಯೋಜನ ಪಡೆದು ಬದುಕಿನಲ್ಲೂ ಮುಂದರೆ ಬರುವಂತೆ ಆಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದೇವೆ ಎಂದು ಹೇಳಿದರು.
ಆರ್ ಎಸ್ ಎಸ್ ಸ್ವದೇಶಿಯರಿಂದ ಸ್ಥಾಪನೆಯಾಗಿದೆ
ಆರ್ ಎಸ್ ಎಸ್ ಗೆ ಸುದೀರ್ಘ ಇತಿಹಾಸ ಇದೆ. ಮಹಾತ್ಮಾ ಗಾಂಧೀಜಿ ಸ್ವಾತಂತ್ರ್ಯ ಹೋರಾಟವನ್ನು ಪ್ರಾರಂಭ ಮಾಡಿದರು, ಅದು ಒಂದು ಚಳುವಳಿಯಾಗಿ ರೂಪುಗೊಂಡಿತು. ಕಾಂಗ್ರೆಸ್ ವಿದೇಶಿಯರಿಂದ ಸ್ಥಾಪನೆಯಾಗಿದ್ದು, ಆರ್ ಎಸ್ ಎಸ್ ಸ್ವದೇಶಿಯರಿಂದ ಸ್ಥಾಪನೆಯಾಗಿದ್ದು, ಹೀಗಾಗಿ ಇದಕ್ಕೆ ಮನ್ನಣೆ ಪ್ರಶ್ನೆ ಬರುವುದಿಲ್ಲ. ದೇಶದಲ್ಲಿ ಸಾಕಷ್ಟು ನೋಂದಾಯಿತ ಮತ್ತು ನೋಂದಣಿಯಾಗದ ಅನೇಕ ಸಂಸ್ಥೆಗಳಿವೆ. ದೇಶದಲ್ಲಿ ಎಲ್ಲದಕ್ಕೂ ಕಾನೂನಿನಲ್ಲಿ ಅವಕಾಶ ಇದೆ. ಆರ್ ಎಸ್ ಎಸ್ ಇಡಿ ಜಗತ್ತಿನಲ್ಲಿಯೇ ಅತಿ ದೊಡ್ಡ ಸಂಸ್ಥೆ ಮತ್ತು ಜನಸೇವೆಯಲ್ಲಿ ಶ್ರೇಷ್ಟವಾದ ಕೆಲಸ ಮಾಡುತ್ತ ಬಂದಿದೆ. ಹೀಗಾಗಿ ಆಗಾಗ ಕೆಲವರು ಈ ರೀತಿಯ ಮಾತುಗಳನ್ನು ಆಡುತ್ತಾರೆ. ಆರ್ ಎಸ್ ಎಸ್ ಜನ ಸೇವೆಯಲ್ಲಿ ಮುಂದುವರೆಯುತ್ತದೆ. ಅದರ ಮಾರ್ಗದರ್ಶನದಲ್ಲಿ ನಮ್ಮ ರಾಜಕೀಯ ತತ್ವ ಹಾಗೂ ಮೌಲ್ಯಗಳು ಬಂದಿವೆ ಎಂದು ಹೇಳಿದರು.
ಮೂರು ಸ್ಥಾನ ಗೆಲುವು
ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಇಬ್ಬರೂ ಅಭ್ಯರ್ಥಿಗಳು ಗೆಲ್ಲುವುದು ನಿಶ್ಚಿತ ನಮ್ಮ ಹೆಚ್ಚುವರಿ ಮತಗಳನ್ನು ನಮ್ಮ ಮೈತ್ರಿ ಪಕ್ಷ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಕುಳಿತುಕೊಂಡು ಯಾವ ರೀತಿ ಯಾರಿಗೆ ಏನು ಕೊಡಬೇಕೆಂದು ತೀರ್ಮಾನ ಮಾಡುತ್ತಾರೆ. ಬಿಜೆಪಿಯ ಇಬ್ಬರು ಮತ್ತು ಮೈತ್ರಿ ಅಭ್ಯರ್ಥಿ ಕೂಡ ಗೆಲ್ಲುತ್ತಾರೆ ಎನ್ನುವ ವಿಶ್ವಾಸ ಇದೆ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಶಾಸಕರಾದ ಶ್ರೀ ಸಿ.ಸಿ.ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಸ್.ವಿ.ಸಂಕನೂರ, ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷರಾದ ಶ್ರೀ ರಾಜು ಕುರಡಗಿ ಸೇರಿದಂತೆ ಪಕ್ಷದ ಹಲವಾರು ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP