




ಬಳ್ಳಾರಿ, 10 ಜೂನ್ (ಹಿ.ಸ.) :
ಆ್ಯಂಕರ್ : ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರ ಪತ್ನಿ ಗಾಲಿ ಲಕ್ಷ್ಮಿ ಅರುಣಾ ಅವರು ತಮ್ಮ ಹುಟ್ಟವನ್ನು ಆಚರಿಸಿಕೊಳ್ಳುವುದರ ಜೊತೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರದ ಮೆಹಂದಿ (ಮದರಂಗಿ)ಯನ್ನು ಹಸ್ತಗಳಲ್ಲಿ ಬಿಡಿಸಿಕೊಳ್ಳುವ ಮೂಲಕ ಅನೇಕರ ಗಮನ ಸೆಳೆದಿದ್ದಾರೆ.
ನರೇಂದ್ರ ಮೋದಿ ಅವರು ಸುದೀರ್ಘ 12 ವರ್ಷಗಳ ಕಾಲ ಪ್ರಧಾನ ಮಂತ್ರಿಗಳಾಗಿ ಅಧಿಕಾರದಲ್ಲಿ ಇರುವ ಮೂಲಕ ಜವಾಹರಲಾಲ್ ನೆಹರು ಅವರ ದಾಖಲೆಯನ್ನು ಮುರಿದ ಹಿನ್ನಲೆಯಲ್ಲಿ ದೇಶಾದ್ಯಂತ ನರೇಂದ್ರ ಮೋದಿ ಅವರ ಹೆಸರಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಮತ್ತು ಸಿಹಿ ಹಂಚುವಿಕೆಗಳು ಬುಧವಾರ ನಡೆದಿವೆ.
ಬಳ್ಳಾರಿ ನಗರ ಬಿಜೆಪಿಯು ನಗರದ ಆರಾಧ್ಯದೈವ ಶ್ರೀಕನಕ ದುರ್ಗಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ - ಪ್ರಾರ್ಥನೆ ಸಲ್ಲಿಸಿ, ಆವರಣದಲ್ಲಿ ಕೇಕ್ ಕತ್ತಿರಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿತು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್