ಜನಕಲ್ಯಾಣಕ್ಕೆ ಸಮರ್ಪಿತ ನಾಯಕ ಪ್ರಧಾನಿ ಮೋದಿ : ಅಶೋಕ್
ಬೆಂಗಳೂರು, 10 ಜೂನ್ (ಹಿ.ಸ.) : ಆ್ಯಂಕರ್ : ದೇಶದ ಅಭಿವೃದ್ಧಿ, ಸುಶಾಸನ ಮತ್ತು ಜನಕಲ್ಯಾಣಕ್ಕೆ ಸಮರ್ಪಿತ ನಾಯಕತ್ವದ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್
Ashok post


ಬೆಂಗಳೂರು, 10 ಜೂನ್ (ಹಿ.ಸ.) :

ಆ್ಯಂಕರ್ : ದೇಶದ ಅಭಿವೃದ್ಧಿ, ಸುಶಾಸನ ಮತ್ತು ಜನಕಲ್ಯಾಣಕ್ಕೆ ಸಮರ್ಪಿತ ನಾಯಕತ್ವದ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿದ ಸಂದೇಶದಲ್ಲಿ, ಜನಸೇವೆಯ ಪಥದಲ್ಲಿ 4,399 ದಿನಗಳನ್ನು ಪೂರೈಸಿರುವ ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ದಾಖಲೆಯನ್ನು ಹಿಂದಿಕ್ಕಿ, ಭಾರತದ ಇತಿಹಾಸದಲ್ಲಿ ಅತ್ಯಂತ ದೀರ್ಘಾವಧಿ ನಿರಂತರವಾಗಿ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನ ಮಂತ್ರಿಯಾಗಿ ಹೊಸ ಅಧ್ಯಾಯ ಬರೆದಿದ್ದಾರೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಅವರ ದೂರದೃಷ್ಟಿಯ ನಾಯಕತ್ವವು ದೇಶದ ಅಭಿವೃದ್ಧಿ, ಸುಶಾಸನ ಹಾಗೂ ಜನಕಲ್ಯಾಣದ ಕ್ಷೇತ್ರಗಳಲ್ಲಿ ಮಹತ್ವದ ಬದಲಾವಣೆಗಳನ್ನು ತಂದಿದ್ದು, ಭಾರತವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಬಲಿಷ್ಠ ರಾಷ್ಟ್ರವನ್ನಾಗಿ ರೂಪಿಸಲು ನೆರವಾಗಿದೆ ಎಂದು ಅಶೋಕ್ ಪ್ರಶಂಸಿಸಿದ್ದಾರೆ.

“ಸಂಕಲ್ಪದಿಂದ ಸಿದ್ಧಿಯತ್ತ” ಎಂಬ ಧ್ಯೇಯದೊಂದಿಗೆ ನವಭಾರತ ನಿರ್ಮಾಣದ ಪಯಣವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ಪ್ರಧಾನಿ ಮೋದಿ ಅವರ ನಾಯಕತ್ವ ದೇಶಕ್ಕೆ ಮತ್ತಷ್ಟು ಪ್ರೇರಣೆಯಾಗಲಿ ಎಂದು ಅವರು ಹಾರೈಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande