
ಮೈಸೂರು, 10 ಜೂನ್ (ಹಿ.ಸ.) :
ಆ್ಯಂಕರ್ : ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು 12 ವರ್ಷಗಳ ನಿರಂತರ ಸೇವೆ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ಮೈಸೂರಿನ ಶ್ರೀ ಚಂದ್ರಮೌಳೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ನಡೆಯಿತು.
ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಪ್ರಧಾನಿ ಮೋದಿ ಅವರ ಸುದೀರ್ಘ ನಾಯಕತ್ವದಲ್ಲಿ ಭಾರತವು ಮತ್ತಷ್ಟು ಅಭಿವೃದ್ಧಿ ಹೊಂದಿ, ವಿಶ್ವದ ಪ್ರಮುಖ ರಾಷ್ಟ್ರಗಳ ಸಾಲಿನಲ್ಲಿ ಇನ್ನಷ್ಟು ಎತ್ತರಕ್ಕೆ ಏರಲಿ ಎಂದು ಪ್ರಾರ್ಥನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮೈಸೂರು ನಗರ ಬಿಜೆಪಿ ಅಧ್ಯಕ್ಷ ಎಲ್. ನಾಗೇಂದ್ರ ಹಾಗೂ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ದಿನೇಶ್ ಅವರ ನೇತೃತ್ವದಲ್ಲಿ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರು, ಮುಖಂಡರು ಮತ್ತು ಸಾರ್ವಜನಿಕರು ಭಾಗವಹಿಸಿ ಪ್ರಧಾನಿ ಮೋದಿ ಅವರ 12 ವರ್ಷಗಳ ಆಡಳಿತಾವಧಿಯನ್ನು ಅಭಿನಂದಿಸಿ ಶುಭಾಶಯ ಕೋರಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.