
ಕೋಲಾರ, ೧೦ ಜೂನ್ (ಹಿ.ಸ) :
ಆ್ಯಂಕರ್ : ರಾಸಾಯನಿಕ ಕೃಷಿಯ ಬದಲಾಗಿ ನೈಸರ್ಗಿಕ ಕೃಷಿಯ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಪ್ರಾಯೋಜಕತ್ವದ ಒಂದು ದಿನ ಜಿಲ್ಲಾ ಮಟ್ಟದ ನೈಸರ್ಗಿಕ ಕೃಷಿಯ ಬಗ್ಗೆ ಕಾರ್ಯಾಗಾರವನ್ನು ಜೂನ್ ೧೫ ರಂದು ಸೋಮವಾರ ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ನಗರದ ಹೊರವಲಯದ ಟಮಕ ಕೃಷಿ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಕೊಮ್ಮನಹಳ್ಳಿ ಆನಂದ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ,
ನೈಸರ್ಗಿಕ ಸಾವಯವ ಕೃಷಿ ಬಗ್ಗೆ ಪ್ರಾತ್ಯಕ್ಷತೆ ಚಿಂತನ ಮಂಥನ, ವಿಚಾರ ವಿನಿಮಯ ಜೊತೆಗೆ ಉಪನ್ಯಾಸ ಏರ್ಪಡಿಸಿದ್ದು ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ನವೀನ್ ಕುಮಾರ್, ಉಪಾಧ್ಯಕ್ಷ ಬ್ಯಾಟರಂಗೇಗೌಡ, ಸೇರಿದಂತೆ ವಿಜ್ಞಾನಿಗಳು, ಹವಾಮಾನ ಇಲಾಖೆಯ ಅಧಿಕಾರಿಗಳು ಭಾಗವಹಿಸಿ ಮಾಹಿತಿ ನೀಡಲಿದ್ದು ಜಿಲ್ಲೆಯ ನೈಸರ್ಗಿಕ ರೈತರು, ಬಿಜೆಪಿ ಪದಾಧಿಕಾರಿಗಳು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಾಗಾರದ ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್