ರಾಜ್ಯದಲ್ಲಿ ಇಂದು ವ್ಯಾಪಕ ಮಳೆ ಸಾಧ್ಯತೆ
ನಾನಾ
Alert


ಬೆಂಗಳೂರು, 10 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯದಾದ್ಯಂತ ಇಂದು ಹಲವೆಡೆ ಮಳೆಯಾಗುವ ಸಾಧ್ಯತೆ ಇದ್ದು, ಗುಡುಗು-ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ನಾನಾ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಅತಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಗುಡುಗು-ಸಿಡಿಲಿನೊಂದಿಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇದ್ದು, ನದಿಗಳು ಮತ್ತು ಹೊಳೆಗಳ ಸಮೀಪ ವಾಸಿಸುವವರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಕೃಷಿಕರು ಬೆಳೆ ಸಂರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ನೀಡಲಾಗಿದ್ದು, ಮೀನುಗಾರರು ಸಮುದ್ರಕ್ಕೆ ತೆರಳುವ ಮುನ್ನ ಹವಾಮಾನ ಮಾಹಿತಿ ಪರಿಶೀಲಿಸುವಂತೆ ಸೂಚಿಸಲಾಗಿದೆ.

ಮುಂಗಾರು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ. ಸಾರ್ವಜನಿಕರು ಹವಾಮಾನ ಇಲಾಖೆಯ ಅಧಿಕೃತ ಮುನ್ಸೂಚನೆಗಳನ್ನು ಗಮನಿಸಿ ಸುರಕ್ಷತಾ ಕ್ರಮಗಳನ್ನು ಪಾಲಿಸುವುದು ಅಗತ್ಯವಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande