ರುದ್ರಭೂಮಿಗೆ ಮೂಲಸೌಕರ್ಯ ಕೊರತೆ ; ಶವ ಇಟ್ಟು ನಗರಸಭೆ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ
ಬಾಗಲಕೋಟೆ, 11 ಜೂನ್ (ಹಿ.ಸ.) : ಆಂಕರ್ : ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದ ಲಕ್ಷ್ಮೀನಗರ ವಾರ್ಡ್ ನಂ.3ರಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಕಳೆದ 20 ವರ್ಷಗಳಿಂದ ಮೂಲಭೂತ ಸೌಕರ್ಯಗಳ ಕೊರತೆಯಿಂದ ಸಾರ್ವಜನಿಕರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಸಮಸ್ಯೆ ಬಗೆಹರಿಸಲು ಹಲವು ಬಾರಿ ಮನವಿ ಮಾಡಿದರೂ ನ
Rudra bhumi


ಬಾಗಲಕೋಟೆ, 11 ಜೂನ್ (ಹಿ.ಸ.) :

ಆಂಕರ್ : ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದ ಲಕ್ಷ್ಮೀನಗರ ವಾರ್ಡ್ ನಂ.3ರಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಕಳೆದ 20 ವರ್ಷಗಳಿಂದ ಮೂಲಭೂತ ಸೌಕರ್ಯಗಳ ಕೊರತೆಯಿಂದ ಸಾರ್ವಜನಿಕರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಸಮಸ್ಯೆ ಬಗೆಹರಿಸಲು ಹಲವು ಬಾರಿ ಮನವಿ ಮಾಡಿದರೂ ನಗರಸಭೆ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಆರೋಪಿಸಿರುವ ಸ್ಥಳೀಯರು, ಇದೀಗ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರುದ್ರಭೂಮಿಯಲ್ಲಿ ಶವ ಸಂಸ್ಕಾರಕ್ಕೆ ಅಗತ್ಯವಾದ ಮೂಲ ಸೌಲಭ್ಯಗಳಾದ ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ, ಸ್ವಚ್ಛತೆ, ಶೆಡ್ ಸೇರಿದಂತೆ ಅಗತ್ಯ ಸೌಲಭ್ಯಗಳು ಇಲ್ಲದಿರುವುದರಿಂದ ಅಂತ್ಯಕ್ರಿಯೆ ನಡೆಸುವ ಸಂದರ್ಭದಲ್ಲಿ ಜನರು ಸಂಕಷ್ಟ ಅನುಭವಿಸುವಂತಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಮಳೆ, ಬಿಸಿಲು ಎನ್ನದೆ ಅಂತ್ಯಕ್ರಿಯೆಗೆ ಆಗಮಿಸುವ ಕುಟುಂಬಸ್ಥರು ಹಾಗೂ ಸಾರ್ವಜನಿಕರು ಇಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಹಲವು ವರ್ಷಗಳಿಂದ ಈ ಸಮಸ್ಯೆ ಮುಂದುವರಿದಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ನಗರಸಭೆ ಆಡಳಿತ ಯಾವುದೇ ಶಾಶ್ವತ ಕ್ರಮ ಕೈಗೊಂಡಿಲ್ಲ ಎಂಬುದು ಸ್ಥಳೀಯರ ಆರೋಪವಾಗಿದೆ.

ಸಮಸ್ಯೆ ಕುರಿತು ನಗರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ವಾರ್ಡ್ ನಿವಾಸಿಗಳು, ಕೂಡಲೇ ರುದ್ರಭೂಮಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನು ಮುಂದೆಯೂ ನಿರ್ಲಕ್ಷ್ಯ ಮುಂದುವರಿದರೆ ಮೃತದೇಹವನ್ನು ನಗರಸಭೆ ಕಚೇರಿ ಮುಂದೆ ಇಟ್ಟು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸಾರ್ವಜನಿಕರು ಎಚ್ಚರಿಕೆ ನೀಡಿದ್ದಾರೆ.

ನಗರಸಭೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವಾಸ್ತವ ಪರಿಸ್ಥಿತಿ ಪರಿಶೀಲಿಸಿ, ಸಾರ್ವಜನಿಕರ ಬಹುಕಾಲದ ಬೇಡಿಕೆಯನ್ನು ಈಡೇರಿಸಬೇಕು ಎಂಬ ಒತ್ತಾಯ ಕೇಳಿ ಬಂದಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande