ಐತಿಹಾಸಿಕ ಲಕ್ಕುಂಡಿ ಗ್ರಾಮಕ್ಕೆ ಛತ್ತೀಸ್ಗಢ ರಾಜ್ಯದ ಸಚಿವರ ಭೇಟಿ
ಗದಗ, 11 ಜೂನ್ (ಹಿ.ಸ.) : ಆ್ಯಂಕರ್ : ಛತ್ತೀಸ್‌ಗಢ ರಾಜ್ಯದ ಶಾಲಾ ಶಿಕ್ಷಣ, ಗ್ರಾಮೋದ್ಯಮ, ಕಾನೂನು ಹಾಗೂ ಶಾಸನ ವ್ಯವಹಾರಗಳ ಸಚಿವರಾದ ಗಜೆಂದ್ರ ಯಾದವ್ ಅವರು ಇಂದು ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಕ್ಷೇತ್ರಕ್ಕೆ ಭೇಟಿ ನೀಡಿ ಅಲ್ಲಿನ ಪುರಾತನ ದೇವಾಲಯಗಳು ಹಾಗೂ ಪಾರಂಪರಿಕ ಸ್ಮಾರಕಗಳನ್ನು ವೀಕ್ಷಿಸಿದ
ಫೋಟೋ


ಗದಗ, 11 ಜೂನ್ (ಹಿ.ಸ.) :

ಆ್ಯಂಕರ್ : ಛತ್ತೀಸ್‌ಗಢ ರಾಜ್ಯದ ಶಾಲಾ ಶಿಕ್ಷಣ, ಗ್ರಾಮೋದ್ಯಮ, ಕಾನೂನು ಹಾಗೂ ಶಾಸನ ವ್ಯವಹಾರಗಳ ಸಚಿವರಾದ ಗಜೆಂದ್ರ ಯಾದವ್ ಅವರು ಇಂದು ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಕ್ಷೇತ್ರಕ್ಕೆ ಭೇಟಿ ನೀಡಿ ಅಲ್ಲಿನ ಪುರಾತನ ದೇವಾಲಯಗಳು ಹಾಗೂ ಪಾರಂಪರಿಕ ಸ್ಮಾರಕಗಳನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಲಕ್ಕುಂಡಿಯು ದೇಶದಲ್ಲೇ ವಿಶಿಷ್ಟವಾದ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ತಾಣವಾಗಿದ್ದು, ಭಗವಾನ್ ಮಹಾದೇವರ ವಿವಿಧ ಸ್ವರೂಪಗಳನ್ನು ಪ್ರತಿಬಿಂಬಿಸುವ ಅನೇಕ ದೇವಾಲಯಗಳು ಹಾಗೂ ಶಿಲ್ಪಕಲಾ ವೈಭವವನ್ನು ಹೊಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಲಕ್ಕುಂಡಿಯಲ್ಲಿರುವ 11ನೇ ಹಾಗೂ 12ನೇ ಶತಮಾನಗಳ ಐತಿಹಾಸಿಕ ಸ್ಮಾರಕಗಳು ಮತ್ತು ಪುರಾತತ್ವ ಸಂಪತ್ತನ್ನು ಪುರಾತತ್ವ ಇಲಾಖೆ ಸಂರಕ್ಷಿಸಿ ಉಳಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಇಂತಹ ಅಪರೂಪದ ಪರಂಪರೆ ತಾಣಗಳು ದೇಶದಾದ್ಯಂತ ಹೆಚ್ಚಿನ ಪ್ರಚಾರ ಪಡೆಯಬೇಕಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದ ಸಂಬಂಧಿತ ಸಚಿವರೊಂದಿಗೆ ಚರ್ಚಿಸಿ ಲಕ್ಕುಂಡಿಯ ಮಹತ್ವವನ್ನು ರಾಷ್ಟ್ರಮಟ್ಟದಲ್ಲಿ ಪರಿಚಯಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.

ಭೇಟಿಯ ಸಂದರ್ಭದಲ್ಲಿ ತಮ್ಮನ್ನು ಆತ್ಮೀಯವಾಗಿ ದೂರವಾಣಿಯಲ್ಲಿ ಸ್ವಾಗತಿಸಿದ ಕರ್ನಾಟಕ ಸರ್ಕಾರದ ಮಾಜಿ ಕಾನೂನು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ. ಪಾಟೀಲ, ಜಿಲ್ಲಾಡಳಿತ, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ದಿ ಪ್ರಾಧಿಕಾರ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಅವರು ಕೃತಜ್ಞತೆ ಸಲ್ಲಿಸಿದರು.

ಲಕ್ಕುಂಡಿ ಕ್ಷೇತ್ರದ ಅಭಿವೃದ್ಧಿ ಹಾಗೂ ಅದರ ಐತಿಹಾಸಿಕ ಪರಂಪರೆಯ ಸಂರಕ್ಷಣೆಗಾಗಿ ಸ್ಥಳೀಯ ಆಡಳಿತ ಮತ್ತು ಸಂಬಂಧಿತ ಇಲಾಖೆಗಳು ಕೈಗೊಂಡಿರುವ ಕಾರ್ಯಗಳನ್ನು ಶ್ಲಾಘಿಸಿದ ಅವರು, ತಮಗೆ ನೀಡಿದ ಆತ್ಮೀಯ ಆತಿಥ್ಯಕ್ಕಾಗಿ ಎಲ್ಲರಿಗೂ ಧನ್ಯವಾದ ಅರ್ಪಿಸಿದರು.

ಗದಗ- ಇಂದು ನಾನು ಗದಗ ಜಿಲ್ಲೆಯ ಲಕ್ಕುಂಡಿಗೆ ಬಂದಿರುವುದು ನನ್ನ ಸೌಭಾಗ್ಯವಾಗಿದೆ. ಇದು ಒಂದು ಅದ್ಭುತ ನಗರವಾಗಿದ್ದು, ಇಲ್ಲಿ ಭಗವಾನ್ ಮಹಾದೇವರ ವಿವಿಧ ಸ್ವರೂಪಗಳು ಕಂಡುಬರುತ್ತವೆ. ನೂರಾರು ಸಂಖ್ಯೆಯಲ್ಲಿ ಶಿವಲಿಂಗಗಳು ಮತ್ತು ದೇವಾಲಯಗಳ ರೂಪದಲ್ಲಿ ಅವು ಇಲ್ಲಿ ಅವತರಿಸಿವೆ.

ಈ ಸಂದರ್ಭದಲ್ಲಿ ನಾನು ಇಲ್ಲಿ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಇಲ್ಲಿನ ಶಾಸಕರಾದ ಸಿ.ಸಿ. ಪಾಟೀಲ ಹಾಗೂ ಆದರಣೀಯ ಹೆಚ್.ಕೆ. ಪಾಟೀಲರವರು ನಮ್ಮನ್ನು ಆತ್ಮೀಯವಾಗಿ ಸ್ವಾಗತಿಸಿದರು. ಅವರೊಂದಿಗೆ ಚರ್ಚೆ ನಡೆಸಿದೆ.

ವೈಯಕ್ತಿಕವಾಗಿ ನನ್ನ ಆಶಯ ಏನೆಂದರೆ, ಈ ಸ್ಥಳವು ದೇಶದಲ್ಲೇ ಅತ್ಯಂತ ವಿಶಿಷ್ಟವಾದ ಪರಂಪರೆಯ ತಾಣವಾಗಿದೆ. ಪುರಾತತ್ವ ಇಲಾಖೆಯು ನೂರಾರು ವರ್ಷಗಳ ಇತಿಹಾಸ ಹೊಂದಿರುವ, ಸುಮಾರು 11ನೇ ಮತ್ತು 12ನೇ ಶತಮಾನಗಳ ಈ ಅಮೂಲ್ಯ ಪರಂಪರೆಯನ್ನು ಸಂಶೋಧಿಸಿ ಹೊರತಂದಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿಗಳಾದ ರೋಹನ ಜಗದೀಶ, , ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಆರ್. ಎಸ್. ಬುರಡಿ, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಆಯುಕ್ತ ಡಾ: ಶರಣ ಗೋಗೇರಿ, ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ, ಪ್ರವಾಸೋಧ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ವರ ವಿಭೂತಿ ಮೊದಲಾದವರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande