ಡಿಸಿಎಂ ಡಾ. ಜಿ. ಪರಮೇಶ್ವರ್ ಜೊತೆ ಶಾಸಕದ್ವಯರ ಸಮಾಲೋಚನೆ
ದೆಹಲಿ, 11 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರನ್ನು ಶಾಸಕರಾದ ನಾರಾ ಭರತರೆಡ್ಡಿ ಮತ್ತು ಜೆ.ಎನ್. ಗಣೇಶ್ ಅವರು ದೆಹಲಿಯಲ್ಲಿ ಗುರುವಾರ ಭೇಟಿ ಮಾಡಿ, ಜಿಲ್ಲೆಯ ಅಭಿವೃದ್ಧಿ ಕುರಿತು ಸಮಾಲೋಚಲನೆ ನಡೆಸಿದ್ದಾರೆ. ಬಳ್ಳಾರಿ ಜಿಲ್ಲೆಯ ವಿವಿಧ ಅಭಿವೃದ
ಡಿಸಿಎಂ ಡಾ. ಜಿ. ಪರಮೇಶ್ವರ್ ಜೊತೆ ಶಾಸಕ ದ್ವಯರ ಸಮಾಲೋಚನೆ


ಡಿಸಿಎಂ ಡಾ. ಜಿ. ಪರಮೇಶ್ವರ್ ಜೊತೆ ಶಾಸಕ ದ್ವಯರ ಸಮಾಲೋಚನೆ


ದೆಹಲಿ, 11 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರನ್ನು ಶಾಸಕರಾದ ನಾರಾ ಭರತರೆಡ್ಡಿ ಮತ್ತು ಜೆ.ಎನ್. ಗಣೇಶ್ ಅವರು ದೆಹಲಿಯಲ್ಲಿ ಗುರುವಾರ ಭೇಟಿ ಮಾಡಿ, ಜಿಲ್ಲೆಯ ಅಭಿವೃದ್ಧಿ ಕುರಿತು ಸಮಾಲೋಚಲನೆ ನಡೆಸಿದ್ದಾರೆ.

ಬಳ್ಳಾರಿ ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳು, ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳು, ರಸ್ತೆ-ಸೇತುವೆಗಳು, ಕುಡಿಯುವ ನೀರು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಪ್ರಗತಿಯಲ್ಲಿರುವ ಮತ್ತು ಚಾಲನೆ ಆಗಬೇಕಾಗಿರುವ ವಿವಿಧ ಯೋಜನೆಗಳ ಕುರಿತು ಶಾಸಕ ದ್ವಯರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು, ಬಳ್ಳಾರಿ ನಗರ ಮತ್ತು ಕಂಪ್ಲಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಸೂಕ್ತ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande