ಚುನಾವಣೆಗೆ ಮೊದಲು 'ಗೃಹಲಕ್ಷ್ಮಿ', ಚುನಾವಣೆ ಬಳಿಕ 'ಅನರ್ಹ ಲಕ್ಷ್ಮಿ': ಅಶೋಕ್
ಬೆಂಗಳೂರು, 11 ಜೂನ್ (ಹಿ.ಸ.) : ಆ್ಯಂಕರ್ : ಚುನಾವಣೆಗೆ ಮೊದಲು ''ಗೃಹಲಕ್ಷ್ಮಿ'', ಚುನಾವಣೆ ಬಳಿಕ ''ಅನರ್ಹ ಲಕ್ಷ್ಮಿ'' - ಇದೇ ಕಾಂಗ್ರೆಸ್ನ ಗ್ಯಾರಂಟಿಗಳ ನಿಜವಾದ ಮುಖ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಎಕ್ಸನಲ್ಲಿ ಹೇಳಿಕೆ ಬಿಡುಗಡೆ
Ashok


ಬೆಂಗಳೂರು, 11 ಜೂನ್ (ಹಿ.ಸ.) :

ಆ್ಯಂಕರ್ : ಚುನಾವಣೆಗೆ ಮೊದಲು 'ಗೃಹಲಕ್ಷ್ಮಿ', ಚುನಾವಣೆ ಬಳಿಕ 'ಅನರ್ಹ ಲಕ್ಷ್ಮಿ' - ಇದೇ ಕಾಂಗ್ರೆಸ್ನ ಗ್ಯಾರಂಟಿಗಳ ನಿಜವಾದ ಮುಖ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಎಕ್ಸನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು,

ಪ್ರತಿ ಮನೆಯ ಯಜಮಾನಿಗೆ ₹2,000 ಎಂದು ಮತ ಪಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್, ಈಗ 17 ಜಿಲ್ಲೆಗಳಲ್ಲಿ 1.1 ಲಕ್ಷಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ಹೊರದಬ್ಬಲು ಹೊರಟಿದೆ ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರ ಎಂದು ಕಿಡಿ ಕಾರಿದ್ದಾರೆ.

ಚುನಾವಣೆಗೆ ಮೊದಲು ಕಂಡೀಷನ್ ಅಪ್ಲೈ ಇಲ್ಲ ಎಂಬಂತೆ ಪ್ರಚಾರ ಮಾಡಿದ ಕಾಂಗ್ರೆಸ್, ಈಗ ಒಂದೊಂದೇ ನೆಪ ಹುಡುಕಿ ತಾಯಂದಿರ ಹೆಸರನ್ನು ಪಟ್ಟಿಯಿಂದ ಕಿತ್ತೆಸೆಯುತ್ತಿದೆ. 17 ಜಿಲ್ಲೆಗಳಲ್ಲಿ 1,12,092 ಮಹಿಳೆಯರನ್ನು ಅನರ್ಹರೆಂದು ಗುರುತಿಸಿರುವುದು ಕಾಂಗ್ರೆಸ್ನ ಅಸಲಿ ಮುಖವನ್ನು ಬಯಲು ಮಾಡಿದೆ ಎಂದಿದ್ದಾರೆ.

ಇದಕ್ಕಿಂತ ದೊಡ್ಡ ದುರಂತ ಎಂದರೆ, ಈ ಬಗ್ಗೆ ಪ್ರಶ್ನಿಸಿದಾಗ ಮುಖ್ಯಮಂತ್ರಿಗಳ ಉತ್ತರ - ನನಗೆ ಗೊತ್ತಿಲ್ಲ. ಎಂದಿದ್ದು, ರಾಜ್ಯದ 1.1 ಲಕ್ಷ ಮಹಿಳೆಯರ ಬದುಕಿನ ಪ್ರಶ್ನೆ ಮುಖ್ಯಮಂತ್ರಿಗಳಿಗೆ ಗೊತ್ತಿಲ್ಲ ಎಂದರೆ, ರಾಜ್ಯವನ್ನು ನಡೆಸುತ್ತಿರುವವರು ಯಾರು? ಎಂದು ಪ್ರಶ್ನಿಸಿದ್ದಾರೆ.

ಚುನಾವಣೆಗೂ ಮೊದಲು ಪ್ರತಿ ಮನೆಯ ಯಜಮಾನಿಗೂ ₹2,000 ಎಂದು ಭರವಸೆ. ಚುನಾವಣೆ ಬಳಿಕ ಅನರ್ಹರ ಪಟ್ಟಿ. ಈಗ ಬಯೋಮೆಟ್ರಿಕ್ ಹೆಸರಲ್ಲಿ ಹೊಸ ಕಿರುಕುಳ. ಇದೇನಾ ಕಾಂಗ್ರೆಸ್ನ ಮಹಿಳಾ ಸಬಲೀಕರಣ ಎಂದಿದ್ದಾರೆ.

ವೋಟ್ ಬ್ಯಾಂಕ್ಗಾಗಿ ಮಹಿಳೆಯರನ್ನು ಬಳಸಿಕೊಂಡು, ಅಧಿಕಾರ ಸಿಕ್ಕ ಬಳಿಕ ಅವರ ಹಕ್ಕುಗಳನ್ನು ಕಸಿದುಕೊಳ್ಳುವ ಕಾಂಗ್ರೆಸ್ನ ಈ ದ್ವಂದ್ವ ನೀತಿಯನ್ನು ಕರ್ನಾಟಕದ ಜನತೆ ಗಮನಿಸುತ್ತಿದ್ದಾರೆ.

ಗ್ಯಾರಂಟಿ ಎಂದು ಮತ ಪಡೆದು, ಅನರ್ಹ ಎಂದು ಹಕ್ಕು ಕಸಿಯುವ ಕಾಂಗ್ರೆಸ್ ಸರ್ಕಾರ ರಾಜ್ಯದ ತಾಯಂದಿರಿಗೆ ಉತ್ತರ ಕೊಡಲೇಬೇಕು. ತಕ್ಷಣವೇ ಈ ಅನ್ಯಾಯವನ್ನು ನಿಲ್ಲಿಸಿ, ಅರ್ಹ ಫಲಾನುಭವಿಗಳಿಗೆ ಯಾವುದೇ ಗೊಂದಲವಿಲ್ಲದೆ ಯೋಜನೆಯ ಹಣ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ತಾಯಂದಿರ ಶಾಪಕ್ಕೆ ಈ ಸರ್ಕಾರ ಸುಟ್ಟು ಭಸ್ಮವಾಗುವುದು ಗ್ಯಾರಂಟಿ ಎಂದು ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande