ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸೂಚನೆ
ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸೂಚನೆ
ಕೋಲಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಕರ್ನಾಟಕ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.


ಕೋಲಾರ, ಜೂನ್ ೧೧ (ಹಿ.ಸ) :

ಆ್ಯಂಕರ್ : ಅರಣ್ಯ ಇಲಾಖೆ ಒತ್ತುವರಿ ತೆರವು ಕಾರ್ಯಾಚರಣೆಯ ಬಗ್ಗೆ ಕೋಲಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಒತ್ತುವರಿ ತೆರವು ಕಾರ್ಯಾಚರಣೆ ಕಾರ್ಯವನ್ನು ಮುಂದುವರೆಸುವAತೆ ಸೂಚಿಸಿದ್ದಾರೆ.

ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಭೆಯಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ, ಶಿಕ್ಷಣ ಹಾಗೂ ಆರೋಗ್ಯ ಸೇರಿದಂತೆ ವಿವಿಧ ಪ್ರಮುಖ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಕೃಷಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಕಾರ್ಯದರ್ಶಿಗಳು, ಮುಂಗಾರು ವಿಳಂಬ ಮತ್ತು ಮಳೆ ಕೊರತೆಯಿಂದ ರೈತರು ಈಗಾಗಲೇ ಸಂಕಷ್ಟದಲ್ಲಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಮಾರುಕಟ್ಟೆಯಲ್ಲಿ ನಕಲಿ ಬಿತ್ತನೆ ಬೀಜ ಮಾರಾಟ ಮಾಡುವವರ ಬಗ್ಗೆ ದೂರುಗಳು ಕೇಳಿಬರುತ್ತಿದ್ದು, ಅಂತವರ ವಿರುದ್ಧ ಕೇವಲ ತಪಾಸಣೆ ನಡೆಸಿದರೆ ಸಾಲದು, ತಕ್ಷಣವೇ ಅವರ ಮಾರಾಟ ಪರವಾನಗಿಯನ್ನು (ಲೈಸನ್ಸ್) ರದ್ದುಪಡಿಸಬೇಕು. ರೈತ ಸಂಪರ್ಕ ಕೇಂದ್ರಗಳಿಗೆ ಪೂರೈಕೆಯಾಗುವ ಪ್ರತಿಯೊಂದು ಬಿತ್ತನೆ ಬೀಜಗಳನ್ನು ಕಡ್ಡಾಯವಾಗಿ ಪ್ರಯೋಗಾಲಯದ ತಪಾಸಣೆಗೆ ಒಳಪಡಿಸಿ ಗುಣಮಟ್ಟವನ್ನು ಖಾತರಿಪಡಿಸಿಕೊಂಡೇ ವಿತರಿಸಬೇಕು.

ಇದೇ ವೇಳೆ, ಜಾಗತಿಕ ಸನ್ನಿವೇಶಗಳಿಂದ ರಸಗೊಬ್ಬರ ಕೊರತೆ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರಿಗೆ ಪರ್ಯಾಯವಾಗಿ ಸಾವಯವ ಮತ್ತು ಹಸಿರೆಲೆ ಗೊಬ್ಬರ ಬಳಸಲು ಪ್ರೇರೇಪಿಸಬೇಕು ಹಾಗೂ ತಾಂತ್ರಿಕ ಯೂರಿಯಾವನ್ನು ಕೈಗಾರಿಕೆಗಳಿಗೆ ಅಕ್ರಮವಾಗಿ ಸಾಗಿಸುವುದನ್ನು ಪತ್ತೆಹಚ್ಚಲು ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕರಿಗೆ ಸೂಚಿಸಿದರು. ಜಿಲ್ಲೆಯ ಪ್ರಮುಖ ಬೆಳೆಯಾದ ತೋತಾಪುರಿ ಮಾವಿನ ಬೆಲೆ ತೀವ್ರ ಕುಸಿತ ಕಂಡು ಪ್ರೊಡಕ್ಷನ್ ಕಾಸ್ಟ್ಗಿಂತಲೂ ಕಡಿಮೆ ದರ ಸಿಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ ಅವರು, ತೋಟಗಾರಿಕಾ ಇಲಾಖೆಯು ರೈತರ ಹಿತರಕ್ಷಣೆಗೆ ಧಾವಿಸಬೇಕು ಎಂದರು.

ಮಾವಿನ ಬೆಲೆ ತೀವ್ರ ಕುಸಿತ ಕಂಡಿರುವುದರಿAದ ರೈತರಿಗೆ ಅನ್ಯಾಯವಾಗಲು ಬಿಡಬಾರದು. ರೈತರ ನೆರವಿಗಾಗಿ ಕಳೆದ ಬಾರಿಯಂತೆ ಈ ವರ್ಷವೂ ತಕ್ಷಣವೇ ಬೆಲೆ ವ್ಯತ್ಯಾಸ ಪಾವತಿ ಯೋಜನೆ ಜಾರಿಗೆ ತರಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ಕ್ಯಾಬಿನೆಟ್ ಉಪಸಮಿತಿಯ ಮುಂದೆ ಇಟ್ಟು ಅನುಮೋದನೆ ಪಡೆದುಕೊಳ್ಳಲು ಅಗತ್ಯ ಕ್ರಮ ವಹಿಸಿ. ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ವೇಳೆ ಶಿಕ್ಷಕರ ಡಿಜಿಟಲ್ ಹಾಜರಾತಿಗಾಗಿ ಜಾರಿಗೆ ತಂದಿರುವ 'ಕರ್ತವ್ಯ ಆ್ಯಪ್' ಕುರಿತು ಅವರು ಅತ್ಯಂತ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಶಿಕ್ಷಕರು ಬೆಳಗ್ಗೆ ಶಾಲೆಗೆ ಬಂದು ಜಿಪಿಎಸ್ ಆಧಾರಿತ ಹಾಜರಾತಿ (ಕರ್ತವ್ಯ ಆಪ್) ದಾಖಲಿಸಿದ ನಂತರ, ಯಾವುದೇ ಕಾರಣಕ್ಕೂ ಶಾಲಾ ಅವಧಿಯಲ್ಲಿ ಆವರಣ ಬಿಟ್ಟು ಹೊರಗೆ ಹೋಗುವಂತಿಲ್ಲ. ಒಮ್ಮೆ ಅಟೆಂಡೆನ್ಸ್ ಕೊಟ್ಟಿದ್ದಾರೆ ಎಂದರೆ ಅವರು ಶಾಲೆಯ ಒಳಗೇ ಇದ್ದಾರೆ ಮತ್ತು ಕರ್ತವ್ಯದಲ್ಲಿದ್ದಾರೆ ಎಂದೇ ಅರ್ಥ. ಇದನ್ನು ಉಲ್ಲಂಘಿಸಿದರೆ ಅತ್ಯಂತ ಗಂಭೀರ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ. ಆರೋಗ್ಯ ಇಲಾಖೆಯ ಪರಿಶೀಲನೆ ನಡೆಸಿದ ತುಳಸಿ ಮದ್ದಿನೇನಿ ಅವರು, ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟಲು ತಂತ್ರಜ್ಞಾನ ಆಧಾರಿತ ಮತ್ತು ಕಟ್ಟುನಿಟ್ಟಿನ ತಪಾಸಣೆ ನಡೆಸಲು ಆದೇಶಿಸಿದರು.

ಜಿಲ್ಲೆಯ ಯಾವುದೇ ಸ್ಕ್ಯಾನಿಂಗ್ ಸೆಂಟರ್ಗಳಲ್ಲಿ ಆಧಾರ್ ಕಾರ್ಡ್ ಅಥವಾ ಸೂಕ್ತ ಗುರುತಿನ ಚೀಟಿ ಇಲ್ಲದೆ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಮಾಡಬಾರದು. ಪ್ರತಿ ಸ್ಕ್ಯಾನಿಂಗ್ ಕೇಂದ್ರದ ದೈನಂದಿನ ವರದಿಯನ್ನು ಡಿಎಚ್ಒ ಕಚೇರಿಗೆ ಕಡ್ಡಾಯವಾಗಿ ಸಲ್ಲಿಕೆಯಾಗಬೇಕು. ನಿಯಮ ಉಲ್ಲಂಘಿಸುವ ಕೇಂದ್ರಗಳನ್ನು ತಕ್ಷಣವೇ ಸೀಜ್ ಮಾಡಿ, ಲೈಸನ್ಸ್ ರದ್ದುಗೊಳಿಸಿ ಎಂದು ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸುವ ಪ್ರಕ್ರಿಯೆ ಇಲಾಖೆಯ ನೆಟ್ವರ್ಕ್ ದಾಟಿ ಹೊರಗಿರುವವರಿಗೂ ತಲುಪಬೇಕು. ನಮ್ಮ ಇಲಾಖೆಯ ನೆಟ್ವರ್ಕ್ನಲ್ಲಿ ಬರುವ ಮಕ್ಕಳ ಮಾಹಿತಿ ನಮಗಿರುತ್ತದೆ. ಆದರೆ ನೆಟ್ವರ್ಕ್ನಿಂದ ಹೊರಗಿರುವ ಅಪೌಷ್ಟಿಕ ಮಕ್ಕಳ ಪತ್ತೆ ನಮಗೆ ದೊಡ್ಡ ಸವಾಲು. ಇದಕ್ಕಾಗಿ ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಟ್ಟದಲ್ಲಿ ನಿಯಮಿತವಾಗಿ ತಪಾಸಣಾ ಶಿಬಿರಗಳನ್ನು ಆಯೋಜಿಸಿ, ಈ ಬಗ್ಗೆ ಸ್ಥಳೀಯ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರ ನೀಡಿ, ಎಲ್ಲಾ ಪೋಷಕರು ತಮ್ಮ ಮಕ್ಕಳನ್ನು ಕರೆತರುವಂತೆ ಪ್ರೇರೇಪಿಸಿ ಎಂದರು.

ರೇಷ್ಮೆ ಇಲಾಖೆ: ಇ-ಹರಾಜು ಪ್ರಕ್ರಿಯೆ ಮತ್ತು ಆನ್ಲೈನ್ ಪೇಮೆಂಟ್ ವ್ಯವಸ್ಥೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದ್ದು, ರೈತರಿಗೆ ತೂಕದಲ್ಲಿ ಮೋಸವಾಗದಂತೆ ಡಿಜಿಟಲ್ ನಿಗಾ ವಹಿಸಲಾಗಿದೆ.

ಪಶುಸಂಗೋಪನಾ ಇಲಾಖೆ:ಕೃತಕ ಗರ್ಭಧಾರಣೆ ಮತ್ತು ಲಸಿಕಾಕರಣ ಪ್ರಕ್ರಿಯೆಯನ್ನು ಒಟಿಪಿ ಆಧಾರಿತ 'ಭಾರತ್ ಪಶುಧನ್' ಸಾಫ್ಟ್ವೇರ್ನಲ್ಲಿ ಕಡ್ಡಾಯವಾಗಿ ದಾಖಲಿಸಲಾಗುತ್ತಿದ್ದು, ರೈತರಿಗೆ ನೇರ ಸಂದೇಶ ತಲುಪುವಂತೆ ಮಾಡಲಾಗಿದೆ.

ಗೃಹಲಕ್ಷ್ಮಿ ಯೋಜನೆ: ಜಿಲ್ಲೆಯಲ್ಲಿ ಮೃತಪಟ್ಟ ಫಲಾನುಭವಿಗಳನ್ನು (ಸುಮಾರು ೩,೦೭೭) ಪಟ್ಟಿಯಿಂದ ಕೈಬಿಡಲಾಗಿದ್ದು, ಮೃತರ ಹಣವನ್ನು ಸರ್ಕಾರಿ ಖಾತೆಗೆ ಮರುಜಮಾಲು ಮಾಡಿಕೊಳ್ಳಲಾಗುತ್ತಿದೆ ಎಂದು ಸಭೆಗೆ ತಿಳಿಸಲಾಯಿತು.

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಇಲಾಖೆಗಳ ವ್ಯಾಪ್ತಿಯಲ್ಲಿ ಬರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಾತಿ ಪ್ರಕ್ರಿಯೆ ಕುರಿತು ಪರಿಶೀಲನೆ ನಡೆಸಲಾಯಿತು. ಪೌರಕಾರ್ಮಿಕರು ಹಾಗೂ ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಯಾವುದೇ ಪ್ರವೇಶ ಪರೀಕ್ಷೆಯಿಲ್ಲದೆ, ಸ್ಥಳೀಯ ಕೋಟಾದಡಿ ನೇರವಾಗಿ ಹಾಸ್ಟೆಲ್ ಪ್ರವೇಶ ಕಲ್ಪಿಸಬೇಕು, ಎಂದು ಸೂಚನೆ ನೀಡಿದರು. ಪ್ರಸ್ತುತ ಇರುವ ಬೇಡಿಕೆ ಹಾಗೂ ಲಭ್ಯವಿರುವ ಸೀಟುಗಳ (ಉದಾಹರಣೆಗೆ ೫೦೦ ಸೀಟುಗಳ ಸಾಮರ್ಥ್ಯ) ಆಧಾರದ ಮೇಲೆ ಪಾರದರ್ಶಕವಾಗಿ ಸೀಟು ಹಂಚಿಕೆ ಮಾಡಲು ನಿರ್ದೇಶಿಸಲಾಯಿತು.

ಜಿಲ್ಲೆಯ ಪ್ರಮುಖ ಮಾವಿನ ವಹಿವಾಟಿನ ಬಗ್ಗೆ ಎಪಿಎಂಸಿ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು. ಪ್ರಸಕ್ತ ಸಾಲಿನಲ್ಲಿ ಅಂದಾಜು ೨ ಲಕ್ಷ ಮೆಟ್ರಿಕ್ ಟನ್ ತೋತಾಪುರಿ ಮಾವು ಉತ್ಪಾದನೆಯಾಗುವ ನಿರೀಕ್ಷೆಯಿದ್ದು. ಮಾರುಕಟ್ಟೆಯಲ್ಲಿ ರೈತರಿಗೆ ಯಾವುದೇ ತೊಂದರೆಯಾಗದAತೆ ಸುಗಮ ವಹಿವಾಟಿಗೆ ವ್ಯವಸ್ಥೆ ಮಾಡಲು ಸೂಚಿಸಲಾಯಿತು. ಜೊತೆಗೆ, ಅರಣ್ಯ ಇಲಾಖೆ ವತಿಯಿಂದ ನಡೆಯುತ್ತಿರುವ ಒತ್ತುವರಿ ತೆರವು ಕಾರ್ಯಾಚರಣೆ ಹಾಗೂ ಎಪಿಎಂಸಿ ಆವರಣ ಸೇರಿದಂತೆ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ ಗಿಡ ನೆಡುವ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಮುಂದುವರೆಸಲು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್ ಪಿ ಬಾಗೇವಾಡಿ, ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಸರಿನಾ ಸಿಕ್ಕಲಿಗರ್, ಅಪರ ಪೊಲೀಸ್ ವರಿಷ್ಟಾಧಿಕಾರಿ ಹೆಚ್. ಪಿ ಜಗದೀಶ್, ಉಪಕಾರ್ಯದರ್ಶಿ ಟಿ. ಕೆ. ರಮೇಶ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶ್ರೀನಿವಾಸ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾರಾಯಣಸ್ವಾಮಿ, ತೋಟಗಾರಿಕೆ ಉಪನಿರ್ದೇಶಕ ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಮೈಲಾರಪ್ಪ, ಆಯುಷ್ ಇಲಾಖೆ ಅಧಿಕಾರಿ ರಾಘವೇಂದ್ರ ಶೆಟ್ಟಿಗಾರ್ ಸೇರಿದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande