
ಕೋಲಾರ,೧೧ ಜೂನ್ (ಹಿ.ಸ) :
ಆ್ಯಂಕರ್ : ವಿಧಾನ ಸಭಾ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್ ಅವರ ೪೭ ಜನ್ಮದಿನಾಚರಣೆ ಪ್ರಯುಕ್ತವಾಗಿ ಕ್ಷೇತ್ರದಾದ್ಯಂತ ಸೌಹಾರ್ದತೆ ಮತ್ತು ಅಭೂತಪೂರ್ವ ಅಭಿಮಾನದ ಮಹಾಪೂರಕ್ಕೆ ಸಾಕ್ಷಿಯಾಗಿ ವಿವಿಧ ಕಡೆಗಳಲ್ಲಿ ಬೃಹತ್ ಕೇಕ್ ಕತ್ತರಿಸಿ, ಅತ್ಯಂತ ಆತ್ಮೀಯವಾಗಿ ಅಪ್ಪಿಕೊಂಡು ಶುಭ ಹಾರೈಸಿದರು.
ಪ್ರಾರಂಭದಲ್ಲಿ ಕೋಲಾರದ ರಾಮಸಂದ್ರ ಗೇಟ್ ಬಳಿ ಅಪಾರ ಅಭಿಮಾನಿಗಳು ಒಂದೆಡೆ ಜಮಾಯಿಸಿ, ಶಾಸಕರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಲ್ಲದೆ ಕಾಂಗ್ರೆಸ್ ಮುಖಂಡ ಲಕ್ಷ್ಮೀಸಾಗರ ಸುನಿಲ್ ಕುಮಾರ್ ನೇತೃತ್ವದಲ್ಲಿ ಸುಮಾರು ೩೫ ಅಡಿ ಎತ್ತರದ ಕಟೌಟ್ ನಿರ್ಮಿಸಿ ಪಟಾಕಿ ಸಿಡಿಸಿ ಸ್ವಾಗತ ಕೋರಿದರು, ನಂತರ ನರಸಾಪುರದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಖಾಜಿಕಲ್ಲಹಳ್ಳಿ ಮುನಿರಾಜು ನೇತೃತ್ವದಲ್ಲಿ ಜಮಾಗೊಂಡ ಕಾಂಗ್ರೆಸ್ ಕಾರ್ಯಕರ್ತರು ಮೊದಲಿಗೆ ದರ್ಗಾಗೆ ಭೇಟಿ ನೀಡಿ ನಂತರ ನರಸಾಪುರ ಸೊಸೈಟಿ ಆವರಣದಲ್ಲಿ ಅಪಾರ ಅಭಿಮಾನಗಳ ಬಳಗದೊಂದಿದಿಗೆ ಕೇಕ್ ಕತ್ತರಿಸಿ ಸನ್ಮಾನಿಸಿ ಹುಟ್ಟು ಹಬ್ಬ ಆಚರಣೆ ಮಾಡಿ ಶುಭ ಕೋರಿದರು,
ಕೋಲಾರ ನಗರದಲ್ಲಿ ಕಠಾರಿಪಾಳ್ಯ ಗಂಗಣ್ಣ ಮತ್ತು ಸ್ನೇಹಿತರ ಬಳಗದಿಂದ ಕೋಲಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿ ಬೃಹತ್ ಕೇಕ್ ಕತ್ತರಿಸುವ ಮೂಲಕ ಆಚರಣೆ ಮಾಡಿದರು, ನಂತರ ಮುಸ್ಲಿಂ ಸಮುದಾಯದ ಮುಖಂAಡರೊAದಿಗೆ ಕ್ಲಾಕ್ ಟವರ್ ದರ್ಗಾಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ನಂತರ ಮುಖಂಡರ ನೇತೃತ್ವದಲ್ಲಿ ನಡೆದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು,
ನಗರದ ಹೊರವಲಯದ ಜಿಲ್ಲಾಧಿಕಾರಿ ಕಛೇರಿ ಪಕ್ಕದಲ್ಲಿರುವ ಶಾಸಕರ ಅಥಿತಿ ಗೃಹದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ವೇಮಗಲ್ ನರಸಾಪುರ ಯೋಜನ ಪ್ರಾಧಿಕಾರದ ಅಧ್ಯಕ್ಷರು, ಸದಸ್ಯರು ನಗರಸಭೆ ಮಾಜಿ ಸದಸ್ಯರು ಶಾಸಕರ ಸಿಬ್ಬಂದಿ ವರ್ಗ, ವಿವಿಧ ಸಂಘಟನೆಗಳ ಮುಖಂಡರು ಸೇರಿದಂತೆ ಅಪಾರ ಅಭಿಮಾನಿಗಳ ಮೂಲಕ ಹುಟ್ಟು ಹಬ್ಬ ಆಚರಣೆ ಮಾಡಿದರು.
ಅಭಿಮಾನಿಗಳು ಮಧ್ಯರಾತ್ರಿಯಿಂದಲೇ ತೋರುತ್ತಿರುವ ಈ ನಿಷ್ಕಲ್ಮಷ ಪ್ರೀತಿ, ವಿಶ್ವಾಸಕ್ಕೆ ನಾನು ಋಣಿಯಾಗಿದ್ದೇನೆ. ಕೋಲಾರ ತಾಲೂಕಿನ ಸಮಗ್ರ ಅಭಿವೃದ್ಧಿ ಹಾಗೂ ಕ್ಷೇತ್ರದ ಪ್ರತಿಯೊಬ್ಬ ನಾಗರಿಕನ ಏಳಿಗೆಯೇ ನನ್ನ ಜೀವನದ ಏಕೈಕ ಧ್ಯೇಯ. ನಿಮ್ಮ ಈ ನಂಬಿಕೆಯನ್ನು ನಾನು ಎಂದಿಗೂ ಸುಳ್ಳಾಗಲ್ಲ ಎಂದು ಇದೇ ಸಂದರ್ಭದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು
ಗ್ಯಾರಂಟಿ ಸಮಿತಿ ಜಿಲ್ಲಾ ಅಧ್ಯಕ್ಷ ವೈ.ಶಿವಕುಮಾರ್, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ನಗರ ಬ್ಲಾಕ್ ಅಧ್ಯಕ್ಷ ಸೈಯದ್ ಆಫ್ಸರ್, ಸಿಂಡಿಕೇಟ್ ಸದಸ್ಯ ಸೀಸಂದ್ತ ಗೋಪಾಲಗೌಡ, ಪ್ರಾಧಿಕಾರದ ಅಧ್ಯಕ್ಷ ಉರಟ ಅಗ್ರಹಾರ ಚೌಡರೆಡ್ಡಿ ಮುಂತಾದವರು ಕೊತ್ತೂರು ಮಂಜುನಾಥ್ ರವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್