ಎಂಟಿ ಸೆಟ್ಟೆಬೆಲ್ಲೋ ಹಡಗು ದುರಂತ ; ಮೂವರು ಭಾರತೀಯ ನಾವಿಕರ ಮೃತ್ಯು ದೃಢ
ನವದೆಹಲಿ, 11 ಜೂನ್ (ಹಿ.ಸ.) : ಆ್ಯಂಕರ್ : ಪಲಾವ್ ದೇಶದ ಧ್ವಜ ಹೊಂದಿದ್ದ ಎಂಟಿ ಸೆಟ್ಟೆಬೆಲ್ಲೋ ಹಡಗಿನಲ್ಲಿ ಸಂಭವಿಸಿದ ದುರಂತದಲ್ಲಿ ನಾಪತ್ತೆಯಾಗಿದ್ದ ಮೂವರು ಭಾರತೀಯ ನಾವಿಕರು ಮೃತಪಟ್ಟಿರುವುದು ಅಧಿಕೃತವಾಗಿ ದೃಢಪಟ್ಟಿದೆ. ಅವರ ಮೃತದೇಹಗಳನ್ನು ಪತ್ತೆಹಚ್ಚಿ ಗುರುತಿಸಲಾಗಿದೆ. ಈ ಕುರಿತು ಕೇಂದ್ರ ಬಂದ
ಸರ್ಬಾನಂದ ಸೋನೋವಾಲ್ ಪೋಸ್ಟ್


ನವದೆಹಲಿ, 11 ಜೂನ್ (ಹಿ.ಸ.) :

ಆ್ಯಂಕರ್ : ಪಲಾವ್ ದೇಶದ ಧ್ವಜ ಹೊಂದಿದ್ದ ಎಂಟಿ ಸೆಟ್ಟೆಬೆಲ್ಲೋ ಹಡಗಿನಲ್ಲಿ ಸಂಭವಿಸಿದ ದುರಂತದಲ್ಲಿ ನಾಪತ್ತೆಯಾಗಿದ್ದ ಮೂವರು ಭಾರತೀಯ ನಾವಿಕರು ಮೃತಪಟ್ಟಿರುವುದು ಅಧಿಕೃತವಾಗಿ ದೃಢಪಟ್ಟಿದೆ. ಅವರ ಮೃತದೇಹಗಳನ್ನು ಪತ್ತೆಹಚ್ಚಿ ಗುರುತಿಸಲಾಗಿದೆ.

ಈ ಕುರಿತು ಕೇಂದ್ರ ಬಂದರು, ಹಡಗು ಸಾಗಣೆ ಮತ್ತು ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೋವಾಲ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದ ಸಂದೇಶದಲ್ಲಿ, ಹಡಗಿನಲ್ಲಿ ಸಂಭವಿಸಿದ ದುರಂತದ ಸುದ್ದಿ ಅತ್ಯಂತ ನೋವುಂಟು ಮಾಡಿದೆ ಎಂದು ಅವರು ತಿಳಿಸಿದ್ದಾರೆ.

ಆರಂಭದಲ್ಲಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದ್ದ ಮೂವರು ಭಾರತೀಯ ನಾವಿಕರು ಈಗ ಮೃತಪಟ್ಟಿರುವುದು ಖಚಿತವಾಗಿದೆ. ಮೃತದೇಹಗಳನ್ನು ಪತ್ತೆಹಚ್ಚಿ ಗುರುತಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಈ ಘಟನೆ ಭಾರತೀಯ ನೌಕಾಯಾನ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ ಎಂದಿರುವ ಅವರು, ಮೃತರ ಕುಟುಂಬಗಳ ದುಃಖದಲ್ಲಿ ಕೇಂದ್ರ ಸರ್ಕಾರ ಭಾಗಿಯಾಗಿದ್ದು, ಈ ಸಂಕಷ್ಟದ ಸಮಯದಲ್ಲಿ ಅವರೊಂದಿಗೆ ದೃಢವಾಗಿ ನಿಂತಿದೆ ಎಂದು ತಿಳಿಸಿದ್ದಾರೆ.

ಮೃತರ ಕುಟುಂಬಗಳಿಗೆ ಅಗತ್ಯವಿರುವ ಎಲ್ಲಾ ನೆರವು ಮತ್ತು ಬೆಂಬಲವನ್ನು ಒದಗಿಸಲು ಕೇಂದ್ರ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಅವರು ಭರವಸೆ ನೀಡಿದ್ದಾರೆ.

ಅಲ್ಲದೆ, ರಕ್ಷಿಸಲ್ಪಟ್ಟ ಸಿಬ್ಬಂದಿಯನ್ನು ತಕ್ಷಣವೇ ಭಾರತಕ್ಕೆ ಕರೆತರಲು ಹಾಗೂ ಮೃತಪಟ್ಟ ನಾವಿಕರ ಪಾರ್ಥಿವ ಶರೀರಗಳನ್ನು ಶೀಘ್ರವಾಗಿ ಸ್ವದೇಶಕ್ಕೆ ತಲುಪಿಸಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ಸಚಿವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande