ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ : ಅಧಿಕಾರಿಗಳಿಗೆ ಸೂಚನೆ
ಬಾಗಲಕೋಟೆ, 11 ಜೂನ್ (ಹಿ.ಸ.) : ಆಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಮುಧೋಳ ನಗರಸಭೆ ಅಧಿಕಾರಿಗಳು ಹಾಗೂ ಸಾರ್ವಜನಿಕರೊಂದಿಗೆ ಸಭೆ ನಡೆಸಿ, ನಗರದ ವಿವಿಧ ಸಮಸ್ಯೆಗಳು ಮತ್ತು ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಶಾಸಕ ಆರ್ ಬಿ ತ
Sabhe


ಬಾಗಲಕೋಟೆ, 11 ಜೂನ್ (ಹಿ.ಸ.) :

ಆಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಮುಧೋಳ ನಗರಸಭೆ ಅಧಿಕಾರಿಗಳು ಹಾಗೂ ಸಾರ್ವಜನಿಕರೊಂದಿಗೆ ಸಭೆ ನಡೆಸಿ, ನಗರದ ವಿವಿಧ ಸಮಸ್ಯೆಗಳು ಮತ್ತು ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಶಾಸಕ ಆರ್ ಬಿ ತಿಮ್ಮಪುರ ಸಮಗ್ರ ಚರ್ಚೆ ನಡೆಸಿದರು.

ಸಭೆಯಲ್ಲಿ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಕುಡಿಯುವ ನೀರು, ರಸ್ತೆ, ಸ್ವಚ್ಛತೆ, ಮೂಲಸೌಕರ್ಯ ಸೇರಿದಂತೆ ನಗರದ ವಿವಿಧ ಸಮಸ್ಯೆಗಳ ಕುರಿತು ಚರ್ಚೆ ನಡೆಯಿತು.

ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವಂತೆ ಹಾಗೂ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕು ಹಾಗೂ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ತಿಳಿಸಲಾಯಿತು.

ನಗರದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಜನರ ಅಗತ್ಯಗಳಿಗೆ ಅನುಗುಣವಾಗಿ ಮೂಲಸೌಕರ್ಯ ಕಲ್ಪಿಸಲು ನಿರಂತರವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸದುಗೌಡ ಪಾಟೀಲ, ಲೋಕಾಪೂರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕಿವಡಿ (ವಕೀಲರು), ಮುಖಂಡರಾದ ರಾಘು ಮೊಕಾಶಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ನಗರಸಭೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande