
ವಿಜಯಪುರ, 11 ಜೂನ್ (ಹಿ.ಸ.) :
ಆಂಕರ್ : ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ವಾಹನ ಚಾಲಕರು, ನಿರ್ವಾಹಕರು, ಕ್ಲೀನರ್ಗಳು, ಲೋಡರ್ಗಳು, ಯುಜಿಡಿ ಕಾರ್ಮಿಕರು, ಸೂಪರ್ವೈಸರ್ಗಳು ಹಾಗೂ ಪೌರಕಾರ್ಮಿಕರನ್ನು ಸರ್ಕಾರಿ ಆದೇಶದಂತೆ ನೇರ ನೇಮಕಾತಿ ಹಾಗೂ ನೇರ ವೇತನ ವ್ಯವಸ್ಥೆಯಡಿ ಸೇರಿಸಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಲಾಯಿತು.
ವಿಜಯಪುರ ಮಹಾನಗರ ಪಾಲಿಕೆ ವಾಹನ ಚಾಲಕರು-ನಿರ್ವಾಹಕರ ಕ್ಷೇಮಾಭಿವೃದ್ಧಿ ಸಂಘ ಹಾಗೂ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಹಲವು ವರ್ಷಗಳಿಂದ ಪಾಲಿಕೆಯಲ್ಲಿ ಸೇವೆ ಸಲ್ಲಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಲಾಯಿತು.
ನೌಕರರು ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದರೂ, ಹೊರಗುತ್ತಿಗೆ ಪದ್ಧತಿಯಿಂದಾಗಿ ಕಡಿಮೆ ವೇತನ, ಉದ್ಯೋಗ ಭದ್ರತೆ ಕೊರತೆ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದ್ದರಿಂದ ಸರ್ಕಾರದ ಆದೇಶಗಳನ್ನು ಜಾರಿಗೊಳಿಸಿ, ಅವರನ್ನು ನೇರ ವೇತನ ಹಾಗೂ ನೇರ ನೇಮಕಾತಿ ವ್ಯಾಪ್ತಿಗೆ ತರಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande