
ಬಳ್ಳಾರಿ, 11 ಜೂನ್ (ಹಿ.ಸ.) :
ಆ್ಯಂಕರ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಬಳ್ಳಾರಿ ಜಿಲ್ಲೆಯ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಆಯ್ಕೆಗಾಗಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಆಯ್ಕೆ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ತಾತ್ಕಾಲಿಕ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಅಭ್ಯರ್ಥಿಗಳು ಹಾಗೂ ಸಾರ್ವಜನಿಕರು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿ ಕಚೇರಿ, ಆಯಾ ಗ್ರಾಮ ಪಂಚಾಯತಿ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಮತ್ತು ಜಿಲ್ಲಾಧಿಕಾರಿಗಳ ಕಚೇರಿಯ ಸೂಚನಾ ಫಲಕಗಳಲ್ಲಿ ಪರಿಶೀಲಿಸಿಕೊಳ್ಳಬಹುದು.
ತಾತ್ಕಾಲಿಕವಾಗಿ ಆಯ್ಕೆಯಾದ ಅಂಗನವಾಡಿ ಸಹಾಯಕಿಯರ ವಿವರ:
ಅರಣಾ ತಂದೆ ಹೊನ್ನುರಪ್ಪ(ಮೆರಿಟ್): ಬಳ್ಳಾರಿ (ನಗರ) ಯೋಜನೆಯ ಎಂ.ವಿ.ನಗರ ಅಂಗನವಾಡಿ ಕೇಂದ್ರ.
ಕೆ.ಬಿಯಾ ಗಂಡ ರವಿಕುಮಾರ(ಮೆರಿಟ್): ಸಿರುಗುಪ್ಪ ಯೋಜನೆಯ ಸಿರುಗುಪ್ಪ-37 ಅಂಗನವಾಡಿ ಕೇಂದ್ರ.
ಪಿ.ಎಸ್.ಚೈತ್ರ ತಂದೆ ಪಿ.ಶೇಖಣ್ಣ(ನ್ಯಾಯಾಲಯ ತೀರ್ಪಿನನ್ವಯ): ಸಿರುಗುಪ್ಪ ಯೋಜನೆಯ ಗೋಸುಬಾಳು-1 ಅಂಗನವಾಡಿ ಕೇಂದ್ರ.
ಆಕ್ಷೇಪಣೆ ಸಲ್ಲಿಕೆಗೆ ಜೂನ್ 25 ಕೊನೆಯ ದಿನವಾಗಿದ್ದು, ಪ್ರಕಟಿತ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಆಕ್ಷೇಪಣೆಗಳಿದ್ದಲ್ಲಿ, ಸಾರ್ವಜನಿಕರು ಅಥವಾ ಅಭ್ಯರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಲಿಖಿತವಾಗಿ ಆಕ್ಷೇಪಣೆ ಸಲ್ಲಿಸಬೇಕಾಗಿದೆ.
ನಿಗದಿತ ಸಮಯದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್