ಇಂದು ತೈಲ ಮತ್ತು ಅನಿಲ ಅನ್ವೇಷಣೆಗೆ ತ್ರಿಪಕ್ಷೀಯ ಒಪ್ಪಂದ
ನವದೆಹಲಿ, 11 ಜೂನ್ (ಹಿ.ಸ.) : ಆ್ಯಂಕರ್ : ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಇಂದು ಅಸ್ಸಾಂ–ನಾಗಾಲ್ಯಾಂಡ್ ಗಡಿಯುದ್ದಕ್ಕೂ ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲದ ಅನ್ವೇಷಣೆ ಹಾಗೂ ಉತ್ಪಾದನೆಗೆ ಸಂಬಂಧಿಸಿದ ಮಹತ್ವದ ತ್ರಿಪಕ್ಷೀಯ ತಿಳಿವಳಿಕಾ ಒಪ್ಪಂದ (ಎಂಒಯು) ಕಾರ್ಯಕ್ರಮದಲ್ಲಿ ಭಾಗವಹಿಸಲ
Amit sha program


ನವದೆಹಲಿ, 11 ಜೂನ್ (ಹಿ.ಸ.) :

ಆ್ಯಂಕರ್ : ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಇಂದು ಅಸ್ಸಾಂ–ನಾಗಾಲ್ಯಾಂಡ್ ಗಡಿಯುದ್ದಕ್ಕೂ ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲದ ಅನ್ವೇಷಣೆ ಹಾಗೂ ಉತ್ಪಾದನೆಗೆ ಸಂಬಂಧಿಸಿದ ಮಹತ್ವದ ತ್ರಿಪಕ್ಷೀಯ ತಿಳಿವಳಿಕಾ ಒಪ್ಪಂದ (ಎಂಒಯು) ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ಒಪ್ಪಂದವು ನಾಗಾಲ್ಯಾಂಡ್ ಸರ್ಕಾರ, ಅಸ್ಸಾಂ ಸರ್ಕಾರ ಹಾಗೂ ಭಾರತ ಸರ್ಕಾರದ ನಡುವೆ ನಡೆಯಲಿದ್ದು, ಗಡಿ ಪ್ರದೇಶದಲ್ಲಿರುವ ತೈಲ ಮತ್ತು ನೈಸರ್ಗಿಕ ಅನಿಲ ಸಂಪನ್ಮೂಲಗಳ ಅನ್ವೇಷಣೆ, ಅಭಿವೃದ್ಧಿ ಮತ್ತು ಉತ್ಪಾದನೆಗೆ ಸಹಕಾರ ಒದಗಿಸುವ ಉದ್ದೇಶ ಹೊಂದಿದೆ.

ಅಸ್ಸಾಂ–ನಾಗಾಲ್ಯಾಂಡ್ ಗಡಿ ಪ್ರದೇಶದಲ್ಲಿ ತೈಲ ಮತ್ತು ಅನಿಲದ ಅಪಾರ ಸಾಧ್ಯತೆಗಳಿದ್ದು, ಈ ಒಪ್ಪಂದದ ಮೂಲಕ ಎರಡೂ ರಾಜ್ಯಗಳ ನಡುವೆ ಸಮನ್ವಯ ಸಾಧಿಸಿ ಇಂಧನ ಕ್ಷೇತ್ರದ ಅಭಿವೃದ್ಧಿಗೆ ಹೊಸ ಅವಕಾಶಗಳು ಸೃಷ್ಟಿಯಾಗಲಿವೆ. ಜೊತೆಗೆ, ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಸೃಷ್ಟಿ, ಹೂಡಿಕೆ ಹೆಚ್ಚಳ ಹಾಗೂ ಪ್ರದೇಶದ ಆರ್ಥಿಕ ಅಭಿವೃದ್ಧಿಗೂ ಇದು ಉತ್ತೇಜನ ನೀಡುವ ನಿರೀಕ್ಷೆಯಿದೆ.

ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು, ಅಸ್ಸಾಂ ಮತ್ತು ನಾಗಾಲ್ಯಾಂಡ್ ರಾಜ್ಯಗಳ ಪ್ರತಿನಿಧಿಗಳು ಹಾಗೂ ಇಂಧನ ಕ್ಷೇತ್ರದ ಪ್ರಮುಖ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande