ನಾಳೆ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ
ಕೊಪ್ಪಳ, 11 ಜೂನ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಪೆÇಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಯುನಿಸೆಫ್ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ,
Tomorrow is World Day Against Child Labor,


Tomorrow is World Day Against Child Labor,


ಕೊಪ್ಪಳ, 11 ಜೂನ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಪೆÇಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಯುನಿಸೆಫ್ ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಕೊಪ್ಪಳ ಇವರುಗಳ ಸಂಯುಕ್ತ ಆಶ್ರಯದಲ್ಲಿ “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ” ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮ ಜೂನ್ 12ರ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಆಯೋಜಿಸಲಾಗಿದೆ.

ಜಿಲ್ಲಾಧಿಕಾರಿಗಳು ಹಾಗೂ ಕೊಪ್ಪಳ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷರಾದ ಡಾ. ಸುರೇಶ ಬಿ ಇಟ್ನಾಳ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ ಅವರು ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಲ ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿಗಳಾದ ರಾಮ ಎಲ್. ಅರಸಿದ್ಧಿ, ಹಿರಿಯ ಸಿವಿಲ್ ನ್ಯಾಯಾಧೀಶರು, ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್. ದರಗದ, ಅಪರ ಜಿಲ್ಲಾಧಿಕಾರಿಗಳಾದ ಸಿದ್ದರಾಮೇಶ್ವರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಸೋಮಶೇಖರಗೌಡ ಬಸನಗೌಡ ಪಾಟೀಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಪರ ಉಪನಿರ್ದೇಶಕರಾದ ಅಮರೇಶ, ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಸುಧಾ ಗರಗ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಸಿಂಧು ಅಂಗಡಿ, ಜಿಲ್ಲಾ ಮಕ್ಕಳ ರಕ್ಷಣಾ ಯೋಜನೆ- ಯುನಿಸೆಫ್ ಕೊಪ್ಪಳ ಸಂಯೋಜಕರಾದ ಹರೀಶ ಜೋಗಿ, ಜಿಲ್ಲಾ ವಾರ್ತಾಧಿಕಾರಿಗಳಾದ ಗವಿಸಿದ್ದಪ್ಪ ಹೊಸಮನಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಪ್ರಕಾಶ ಕಡಗದ ಅವರು ಪಾಲ್ಗೊಳ್ಳುವರು.

ಕಾರ್ಯಕ್ರಮದಲ್ಲಿ ಕೊಪ್ಪಳ ವೃತ್ತದ ಕಾರ್ಮಿಕ ನಿರೀಕ್ಷಕರಾದ ಮಂಜುಳಾ, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ಬಸವರಾಜ ಹಿರೇಗೌಡ್ರ ಅವರು ಉಪಸ್ಥಿತರಿರುವರು.

ಕಾನೂನು ಸೇವೆಗಳ ಪ್ರಾಧಿಕಾರದ ಧೇಯೋದ್ದೇಶಗಳು: ಜನರಲ್ಲಿ ಕಾನೂನಿನ ಬಗ್ಗೆ ಅರಿವನ್ನು ಉಂಟು ಮಾಡುವುದು. ಉಚಿತ ಕಾನೂನು ನೆರವು ಮತ್ತು ಸಲಹೆಯನ್ನು ಕೊಡುವುದು. ಜನತಾ-ನ್ಯಾಯಾಲಯ (ಲೋಕ ಅಧಾಲತ್)ಗಳ ಮೂಲಕ ಪ್ರಕರಣಗಳನ್ನು ರಾಜಿಗೊಳಿಸಿ ಜನರಿಗೆ ತ್ವರಿತವಾಗಿ ಮತ್ತು ಕಡಿಮೆ ಖರ್ಚಿನಲ್ಲಿ ನ್ಯಾಯ ದೊರಕಿಸಿ ಕೊಡುವುದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಿರಿ.

ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಧೇಯೋದ್ದೇಶಗಳು: ಜಿಲ್ಲೆಯಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಮಕ್ಕಳನ್ನು ಗುರುತಿಸಿ ಅವರಿಗೆ ಪುನರ್ವಸತಿ ಕಲ್ಪಿಸುವುದು. ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ವಿವಿಧ ಇಲಾಖೆ, ಸಂಘ ಸಂಸ್ಥೆಗಳ ಜೊತೆ ಸೇರಿ ಸಂಘಟಿತರಾಗಿ ಪ್ರಯತ್ನಿಸುವುದು. ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯ ದುಷ್ಪರಿಣಾಮದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘವನ್ನು ಸಂಪರ್ಕಿಸಿ ದೂರವಾಣಿ ಸಂಖ್ಯೆ: 08539-221373 ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಕೊಪ್ಪಳ. ಜಿಲ್ಲಾಧಿಕಾರಿಗಳ ಕಛೇರಿ ಕೊಪ್ಪಳ. ಇಲ್ಲಿಗೆ ಸಂಪರ್ಕಿಸಬಹುದು ಎಂದು ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande