
ನವದೆಹಲಿ, 11 ಜೂನ್ (ಹಿ.ಸ.) :
ಆ್ಯಂಕರ್ : ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಅವರು ಇಂದು ನವದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಸೌಜನ್ಯಯುತವಾಗಿ ಭೇಟಿ ಮಾಡಿ ಶುಭಾಶಯ ಕೋರಿದರು.
ಭೇಟಿಯ ಸಂದರ್ಭದಲ್ಲಿ ರಾಜ್ಯದ ಆಡಳಿತಾತ್ಮಕ ಮತ್ತು ರಾಜಕೀಯ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಯಿತು. ನೂತನ ಸರ್ಕಾರವು ಇನ್ನಷ್ಟು ಪರಿಣಾಮಕಾರಿಯಾಗಿ ಜನಪರ ಆಡಳಿತ ನೀಡುವ ಕುರಿತು, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಕೈಗೊಳ್ಳಲಾಗುತ್ತಿರುವ ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಪರಸ್ಪರ ಅಭಿಪ್ರಾಯ ವಿನಿಮಯ ಮಾಡಿಕೊಳ್ಳಲಾಯಿತು.
ಇದೇ ವೇಳೆ, ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಮುಂಬರುವ ರಾಜಕೀಯ ಸವಾಲುಗಳನ್ನು ಎದುರಿಸಲು ಕೈಗೊಳ್ಳಬೇಕಾದ ಕ್ರಮಗಳು ಹಾಗೂ ರಾಜ್ಯದ ರಾಜಕೀಯ ಪರಿಸ್ಥಿತಿಗೆ ಸಂಬಂಧಿಸಿದ ಪ್ರಮುಖ ವಿಚಾರಗಳ ಕುರಿತೂ ಸಮಾಲೋಚನೆ ನಡೆಸಲಾಯಿತು ಎಂದು ಪರಮೇಶ್ವರ ಎಕ್ಸನಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.