
ಬಾಗಲಕೋಟೆ, 12 ಜೂನ್ (ಹಿ.ಸ.) :
ಆಂಕರ್ : ಜಾತ್ಯತೀತ ಪಕ್ಷಗಳು ಹಾಗೂ ಪ್ರಗತಿಪರ ಚಿಂತಕರನ್ನು ಒಳಗೊಂಡಿರುವ ಅಹಿಂದ ಕರ್ನಾಟಕ ಸಂಘಟನೆ ಒಕ್ಕೂಟ ವತಿಯಿಂದ SIR (Special Intensive Revision) ವಿರುದ್ಧ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಜೂನ್ 14ರಂದು ಬಾಗಲಕೋಟೆ ನಗರದಲ್ಲಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ನಗರಸಭೆ ಸದಸ್ಯ ಹಾಜಿಸಾಬ ದಂಡಿನ ಹಾಗೂ ಇತರ ಮುಖಂಡರು ತಿಳಿಸಿದರು.
ಬಾಗಲಕೋಟೆ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, SIR ಪ್ರಕ್ರಿಯೆಯಿಂದ ಸಾರ್ವಜನಿಕರಲ್ಲಿ ಹಲವು ಗೊಂದಲಗಳು ಉಂಟಾಗಿದ್ದು, ಇದರ ಬಗ್ಗೆ ಜನರಿಗೆ ಸಮಗ್ರ ಮಾಹಿತಿ ನೀಡುವ ಅಗತ್ಯವಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ನಾಗರಿಕನ ಹಕ್ಕುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವುದು ಈ ಜಾಥಾದ ಮುಖ್ಯ ಉದ್ದೇಶವಾಗಿದೆ ಎಂದರು.
ಜೂನ್ 14ರಂದು ನಡೆಯುವ ಜಾಥಾದಲ್ಲಿ ಅಹಿಂದ ಸಂಘಟನೆಗೆ ಸೇರಿದ ವಿವಿಧ ಮುಖಂಡರು, ಸಾಮಾಜಿಕ ಕಾರ್ಯಕರ್ತರು, ಪ್ರಗತಿಪರ ಚಿಂತಕರು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ. ಜಾಥಾ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜನರಲ್ಲಿ ಅರಿವು ಮೂಡಿಸಲಿದೆ ಎಂದು ತಿಳಿಸಿದರು.
ಸರ್ಕಾರದ ನೀತಿಗಳು ಮತ್ತು ಆಡಳಿತಾತ್ಮಕ ಕ್ರಮಗಳು ಸಾಮಾನ್ಯ ಜನರ ಮೇಲೆ ಬೀರುವ ಪರಿಣಾಮಗಳ ಕುರಿತು ಚರ್ಚೆ ನಡೆಸಲು ಹಾಗೂ ಜನರ ಅಭಿಪ್ರಾಯಗಳನ್ನು ಒಟ್ಟುಗೂಡಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮುಖಂಡರು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande