ರಾಷ್ಟ್ರಪತಿ ಹಾಗೂ ಉಪರಾಷ್ಟ್ರಪತಿಯನ್ನು ಭೇಟಿಯಾದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ನವದೆಹಲಿ, 12 ಜೂನ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರನ್ನು ಪ್ರತ್ಯೇಕವಾಗಿ ಸೌಜನ್ಯದ ಭೇಟಿಯಾಗಿ ಸಮಾಲೋಚನೆ ನಡೆಸಿದರು. ರಾಷ್ಟ್ರಪತಿ ಭವ
Cm meets President


Cm meets VP


ನವದೆಹಲಿ, 12 ಜೂನ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರನ್ನು ಪ್ರತ್ಯೇಕವಾಗಿ ಸೌಜನ್ಯದ ಭೇಟಿಯಾಗಿ ಸಮಾಲೋಚನೆ ನಡೆಸಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಭೇಟಿಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ವಿವಿಧ ಸಮಕಾಲೀನ ವಿಚಾರಗಳು, ರಾಜ್ಯದ ಅಭಿವೃದ್ಧಿ ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳ ಕುರಿತು ಅಭಿಪ್ರಾಯ ವಿನಿಮಯ ನಡೆಸಿದರು.

ಇದೇ ವೇಳೆ, ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಅವರು ಉಪರಾಷ್ಟ್ರಪತಿಯೊಂದಿಗೆ ಕೂಡ ಸೌಹಾರ್ದಯುತ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯ ಮತ್ತು ರಾಷ್ಟ್ರದ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆದಿರುವುದಾಗಿ ತಿಳಿದು ಬಂದಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande