ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರದ ಕ್ರಮ ; ಜನರ ಅಹವಾಲು ಆಲಿಸಿದ ಮುಖ್ಯಾಧಿಕಾರಿ
ಬಾಗಲಕೋಟೆ, 12 ಜೂನ್ (ಹಿ.ಸ.) : ಆಂಕರ್ : ಬಾಗಲಕೋಟೆ ಜಿಲ್ಲೆಯ ಲೋಕಾಪುರ ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಗಳನ್ನು ಪರಿಶೀಲಿಸಲು ಲೋಕಾಪುರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾಬಣ್ಣ ಪೂಜಾರಿ ಅವರು ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಪಟ್
Water


ಬಾಗಲಕೋಟೆ, 12 ಜೂನ್ (ಹಿ.ಸ.) :

ಆಂಕರ್ : ಬಾಗಲಕೋಟೆ ಜಿಲ್ಲೆಯ ಲೋಕಾಪುರ ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಗಳನ್ನು ಪರಿಶೀಲಿಸಲು ಲೋಕಾಪುರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾಬಣ್ಣ ಪೂಜಾರಿ ಅವರು ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.

ಪಟ್ಟಣದ ಹಲವು ವಾರ್ಡ್ಗಳ ನಿವಾಸಿಗಳು ಮುಖ್ಯಾಧಿಕಾರಿಗಳ ಎದುರು ಕುಡಿಯುವ ನೀರಿನ ಸಮರ್ಪಕ ಪೂರೈಕೆ ಆಗುತ್ತಿಲ್ಲ ಎಂಬ ಸಮಸ್ಯೆಯನ್ನು ವಿವರಿಸಿದರು. ಬೇಸಿಗೆಯ ಹಿನ್ನೆಲೆಯಲ್ಲಿ ನೀರಿನ ಕೊರತೆ ಹೆಚ್ಚಾಗಿದ್ದು, ನಿಯಮಿತವಾಗಿ ನೀರು ಪೂರೈಕೆ ಮಾಡುವಂತೆ ಸಾರ್ವಜನಿಕರು ಮನವಿ ಮಾಡಿದರು.

ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದ ಮುಖ್ಯಾಧಿಕಾರಿ ಸಾಬಣ್ಣ ಪೂಜಾರಿ ಅವರು, ಸ್ಥಳದಲ್ಲಿಯೇ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಪಟ್ಟಣದ ಎಲ್ಲಾ ವಾರ್ಡ್ಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ತಲುಪುವಂತೆ ಪೂರೈಕೆ ವ್ಯವಸ್ಥೆಯನ್ನು ಸರಿಪಡಿಸುವುದು, ನೀರಿನ ವಿತರಣೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳುವಂತೆ ಮಾರ್ಗಸೂಚಿ ನೀಡಿದರು.

ಜನರ ಸಮಸ್ಯೆಗಳನ್ನು ನೇರವಾಗಿ ಆಲಿಸುವ ಮೂಲಕ ಆಡಳಿತವು ಸಾರ್ವಜನಿಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಕಾರ್ಯನಿರ್ವಹಿಸಲಿದೆ ಎಂದು ಅವರು ತಿಳಿಸಿದರು. ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಸಿಬ್ಬಂದಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಇಂಜಿನಿಯರ್ ಪ್ರಶಾಂತ ಪಾಟೀಲ, ಅಬ್ದುಲ್ ರೆಹಮಾನ ತೋರಗಲ್ಲ, ಸುಲ್ತಾನ ಕಲಾದಗಿ, ದುರ್ಗಣ್ಣ ಭಜಂತ್ರಿ, ಗೋಪಾಲ ಲಮಾಣಿ ಸೇರಿದಂತೆ ಪಟ್ಟಣ ಪಂಚಾಯಿತಿ ಸಿಬ್ಬಂದಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande