ಕಾಂಗ್ರೆಸ್ ಕಾರ್ಯಕರ್ತರಿಗೆ ಎಸ್.ಐ.ಆರ್. ಕುರಿತು ತರಬೇತಿ ; ಮತದಾರರ ಹಕ್ಕುಗಳ ರಕ್ಷಣೆಗೆ ಜಾಗೃತಿ ಮೂಡಿಸಲು ಕರೆ
ಬಾಗಲಕೋಟೆ, 12 ಜೂನ್ (ಹಿ.ಸ.) : ಆಂಕರ್ : ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪಕ್ಷದ ಕಾರ್ಯಕರ್ತರಿಗಾಗಿ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಮಹತ್ವದ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆ, ಅದರ ಉದ್ದೇಶ ಹಾಗೂ ಕಾರ
ಕಾಂಗ್ರೆಸ್


ಬಾಗಲಕೋಟೆ, 12 ಜೂನ್ (ಹಿ.ಸ.) :

ಆಂಕರ್ : ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪಕ್ಷದ ಕಾರ್ಯಕರ್ತರಿಗಾಗಿ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಮಹತ್ವದ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆ, ಅದರ ಉದ್ದೇಶ ಹಾಗೂ ಕಾರ್ಯಕರ್ತರು ವಹಿಸಬೇಕಾದ ಜವಾಬ್ದಾರಿಗಳ ಕುರಿತು ಸಮಗ್ರ ಮಾಹಿತಿ ನೀಡಲಾಯಿತು.

ಕಾರ್ಯಾಗಾರದಲ್ಲಿ ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್ ಅವರು ಮಾತನಾಡಿ, ಎಸ್.ಐ.ಆರ್. ಪ್ರಕ್ರಿಯೆಯ ಮಹತ್ವ, ಮತದಾರರ ಪಟ್ಟಿಯಲ್ಲಿನ ಬದಲಾವಣೆಗಳ ಪರಿಶೀಲನೆ, ಅರ್ಹ ಮತದಾರರ ಹಕ್ಕುಗಳ ರಕ್ಷಣೆ ಹಾಗೂ ಕಾರ್ಯಕರ್ತರ ಪಾತ್ರದ ಕುರಿತು ವಿವರಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ಪಟ್ಟಿ ಅತ್ಯಂತ ಪ್ರಮುಖವಾಗಿದ್ದು, ಅದರ ಪರಿಷ್ಕರಣೆ ಪಾರದರ್ಶಕ ಮತ್ತು ನ್ಯಾಯಸಮ್ಮತ ರೀತಿಯಲ್ಲಿ ನಡೆಯಬೇಕಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರು, ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಮೂಲಭೂತ ಪ್ರಜಾಸತ್ತಾತ್ಮಕ ಹಕ್ಕಾಗಿದ್ದು, ಅದರ ರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು. ಸಂವಿಧಾನಾತ್ಮಕ ಸಂಸ್ಥೆಗಳ ಸ್ವಾಯತ್ತತೆ, ಪಾರದರ್ಶಕತೆ ಹಾಗೂ ವಿಶ್ವಾಸಾರ್ಹತೆಯನ್ನು ಕಾಪಾಡಿಕೊಳ್ಳುವುದು ಅಗತ್ಯವಾಗಿದೆ. ಮತದಾರರ ಪಟ್ಟಿಗೆ ಸಂಬಂಧಿಸಿದ ಯಾವುದೇ ಪ್ರಕ್ರಿಯೆಗಳು ಪಕ್ಷಾತೀತವಾಗಿ ಮತ್ತು ನಿಯಮಾನುಸಾರ ನಡೆಯಬೇಕು ಎಂದು ಒತ್ತಿ ಹೇಳಿದರು.

ಜನರು ತಮ್ಮ ಮತದಾನದ ಹಕ್ಕುಗಳ ಬಗ್ಗೆ ಜಾಗೃತರಾಗಬೇಕು. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸರಿಯಾಗಿದೆಯೇ ಎಂಬುದನ್ನು ಪರಿಶೀಲಿಸುವ ಮೂಲಕ ಪ್ರಜಾಪ್ರಭುತ್ವದ ಬಲವರ್ಧನೆಗೆ ಸಹಕರಿಸಬೇಕು ಎಂದು ಕಾರ್ಯಕರ್ತರಿಗೆ ಹಾಗೂ ಸಾರ್ವಜನಿಕರಿಗೆ ಕರೆ ನೀಡಲಾಯಿತು.

ಕಾರ್ಯಾಗಾರದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಶಾಸಕ ಉಮೇಶ್ ಹುಲ್ಲಪ್ಪ ಮೇಟಿ, ಕೆಪಿಸಿಸಿ ಉಪಾಧ್ಯಕ್ಷ ಎಂ.ಬಿ. ಸೌದಾಗರ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ನಾಗರಾಜ್ ಎಸ್. ಹಡ್ಲಿ ಸೇರಿದಂತೆ ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪಕ್ಷದ ಮುಖಂಡರು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನಾ ಬಲವರ್ಧನೆ, ಪಕ್ಷದ ತತ್ವ-ಸಿದ್ಧಾಂತಗಳ ಪ್ರಚಾರ ಹಾಗೂ ಮುಂಬರುವ ರಾಜಕೀಯ ಚಟುವಟಿಕೆಗಳ ಕುರಿತು ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಲಾಯಿತು.

ಎಸ್.ಐ.ಆರ್. ಪ್ರಕ್ರಿಯೆಯಲ್ಲಿ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಂಡು ಮತದಾರರೊಂದಿಗೆ ಸಂಪರ್ಕ ಸಾಧಿಸುವಂತೆ ಸೂಚಿಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande