ಸರ್ಕಾರಿಂದ ವಿದ್ಯಾರ್ಥಿಗಳಿಗೆ ಜೂನ್ 16ರಂದು ಸನ್ಮಾನ
ಗದಗ, 12 ಜೂನ್ (ಹಿ.ಸ.) : ಆ್ಯಂಕರ್ : ಭಾರತೀಯ ವೈದ್ಯಕೀಯ ಸಂಘ (ಐಎಂಎ) ಗದಗ ಘಟಕದ ಶತಮಾನೋತ್ಸವ ಆಚರಣೆ ಅಂಗವಾಗಿ, 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಗದಗ ಜಿಲ್ಲೆಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭವನ್ನು ಜೂನ್ 16ರಂದು ಸಂಜೆ 4 ಗಂಟೆಗೆ ಗದಗ ನಗರದ ಜಿಲ್ಲಾಧಿಕಾರಿ
ಫೋಟೋ


ಗದಗ, 12 ಜೂನ್ (ಹಿ.ಸ.) :

ಆ್ಯಂಕರ್ : ಭಾರತೀಯ ವೈದ್ಯಕೀಯ ಸಂಘ (ಐಎಂಎ) ಗದಗ ಘಟಕದ ಶತಮಾನೋತ್ಸವ ಆಚರಣೆ ಅಂಗವಾಗಿ, 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಗದಗ ಜಿಲ್ಲೆಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭವನ್ನು ಜೂನ್ 16ರಂದು ಸಂಜೆ 4 ಗಂಟೆಗೆ ಗದಗ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಜಿಲ್ಲಾಡಳಿತ, ಗದಗ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಅಗ್ರಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತ್ಸಾಹಿಸಲಾಗುವುದು.

ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಐಎಎಸ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿ ಹಾಗೂ ಕುಲಸಚಿವ ಪ್ರೊ. ಡಾ. ಸುರೇಶ್ ವಿ. ನಾಡಗೌಡರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಎಸ್. ಬುರಡಿ ಭಾಗವಹಿಸಲಿದ್ದಾರೆ.

ಐಎಂಎ ಗದಗ ಶತಮಾನೋತ್ಸವ ಸಮಿತಿ ಅಧ್ಯಕ್ಷ ಡಾ. ಎಸ್.ಆರ್. ನಾಗನೂರ ಅಧ್ಯಕ್ಷತೆ ವಹಿಸಲಿದ್ದಾರೆ. ಐಎಂಎ ಗದಗ ಅಧ್ಯಕ್ಷ ಡಾ. ಶ್ರೀಧರ ವಿ. ಕುರಡಗಿ, ಶತಮಾನೋತ್ಸವ ಸಮಿತಿ ಕಾರ್ಯದರ್ಶಿ ಡಾ. ಪವನ್ ಪಾಟೀಲ ಹಾಗೂ ಐಎಂಎ ಕಾರ್ಯದರ್ಶಿ ಡಾ. ರಾಹುಲ್ ಶಿರೋಳ ಕಾರ್ಯಕ್ರಮದ ಆಯೋಜನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಶೈಕ್ಷಣಿಕ ಸಾಧಕರನ್ನು ಗುರುತಿಸಿ ಗೌರವಿಸುವುದು ಹಾಗೂ ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಉತ್ಸಾಹವನ್ನು ಹೆಚ್ಚಿಸುವ ಉದ್ದೇಶದಿಂದ ಈ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಶಿಕ್ಷಣಾಭಿಮಾನಿಗಳು, ಪಾಲಕರು, ಶಿಕ್ಷಕರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande