
ಬೆಂಗಳೂರು, 12 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯದಾದ್ಯಂತ ಇಂದು ಮಳೆಯ ಚಟುವಟಿಕೆ ಮುಂದುವರಿಯಲಿದ್ದು, ಹಲವೆಡೆ ಗುಡುಗು, ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಕೆಲವು ಪ್ರದೇಶಗಳಲ್ಲಿ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಹಾಗೂ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆಯಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಇನ್ನಷ್ಟು ಹೆಚ್ಚಾಗಲಿದ್ದು, ಕೆಲವೆಡೆ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಸಮುದ್ರ ತೀರ ಪ್ರದೇಶಗಳಲ್ಲಿ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಹಾಗೂ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.