
ಬೆಂಗಳೂರು, 12 ಜೂನ್ (ಹಿ.ಸ.) :
ಆ್ಯಂಕರ್ : ವಿಧಾನ ಸಭೆಯ ಪ್ರತಿ ಪಕ್ಷದ ನಾಯಕ ಆರ್.ಅಶೋಕ ಅವರು ಜ್ವರದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಇಂದಿನ ಎಲ್ಲ ಅಧಿಕೃತ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ ಎಂದು ಅವರ ಆಪ್ತ ಕಾರ್ಯಾಲಯ ತಿಳಿಸಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಪ್ರತಿ ಪಕ್ಷದ ನಾಯಕರ ಕಚೇರಿ, ಆರ್. ಅಶೋಕ್ ಅವರು ಶಾಸಕಾಂಗ ಪಕ್ಷದ ಕಚೇರಿ ಅಥವಾ ಪ್ರತಿಪಕ್ಷದ ನಾಯಕರ ಕಚೇರಿಯಲ್ಲಿ ಸಾರ್ವಜನಿಕ ಭೇಟಿ ಹಾಗೂ ಇತರ ಕಾರ್ಯಕ್ರಮಗಳಿಗೆ ಲಭ್ಯವಿರುವುದಿಲ್ಲ ಎಂದು ತಿಳಿಸಿದೆ.
ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡುಬರುವವರೆಗೆ ನಿಗದಿಯಾಗಿದ್ದ ಎಲ್ಲ ಕಾರ್ಯಕ್ರಮಗಳನ್ನು ಮುಂದೂಡಲಾಗಿದ್ದು, ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರು ಸಹಕರಿಸುವಂತೆ ಮನವಿ ಮಾಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.