ವೈದ್ಯಾಧಿಕಾರಿಗಳ ನೇಮಕಾತಿ, ಅರ್ಜಿ ಆಹ್ವಾನ
ಗದಗ, 12 ಜೂನ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯ ಆರೋಗ್ಯ ಸೇವಾ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ವಿವಿಧ ವಿಭಾಗಗಳ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
ಫೋಟೋ


ಗದಗ, 12 ಜೂನ್ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯ ಆರೋಗ್ಯ ಸೇವಾ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ವಿವಿಧ ವಿಭಾಗಗಳ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಾರ್ವಜನಿಕ ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರ ಹಾಗೂ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ತಾತ್ಕಾಲಿಕವಾಗಿ ಅಥವಾ ಕ್ರಮಬದ್ಧ ನೇಮಕಾತಿ ಆಗುವವರೆಗೆ ಭರ್ತಿ ಮಾಡುವ ಉದ್ದೇಶದಿಂದ ವಾಕ್-ಇನ್ ಇಂಟರ್ವ್ಯೂ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಜಿಲ್ಲೆಯಲ್ಲಿ ವಿವಿಧ ವಿಭಾಗಗಳಲ್ಲಿ ಒಟ್ಟು ಅನೇಕ ಹುದ್ದೆಗಳು ಖಾಲಿ ಇದ್ದು, ಅವುಗಳ ವಿವರ ಹೀಗಿದೆ:

5, ಸಾಮಾನ್ಯ ವೈದ್ಯಕೀಯ, – 2, ಅನೇಸ್ಥೇಶಿಯಾ – 6, ಮಕ್ಕಳ ತಜ್ಞರು – 5, ಚರ್ಮರೋಗ ತಜ್ಞರು – 1, ರೇಡಿಯಾಲಜಿಸ್ಟ್ – 5, ಇಎನ್ಟಿ ತಜ್ಞರು – 2 ಹಾಗೂ ಜಿಡಿಎಂಓ – 17.

ಹುದ್ದೆಗಳು ಖಾಲಿ ಇವೆ ಎಂದು ತಿಳಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಗದಗ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ–101, ಜಿಲ್ಲಾಡಳಿತ ಭವನ, ಹುಬ್ಬಳ್ಳಿ ರಸ್ತೆ ಇಲ್ಲಿ ಕಚೇರಿ ವೇಳೆಯಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಮೂಲ ದಾಖಲೆಗಳು ಹಾಗೂ ಝೆರಾಕ್ಸ್ ಪ್ರತಿಗಳು, ಬಯೋಡೇಟಾ ಮತ್ತು ಗುರುತಿನ ಚೀಟಿ ಕಡ್ಡಾಯವಾಗಿ ತರಬೇಕಾಗಿದೆ.

ಆಯ್ಕೆಯಾದ ತಜ್ಞ ವೈದ್ಯರಿಗೆ ಮಾಸಿಕ ರೂ.1,10,000 ವೇತನ ಹಾಗೂ ಎಂಬಿಬಿಎಸ್ ವೈದ್ಯಾಧಿಕಾರಿಗಳಿಗೆ ಮಾಸಿಕ ರೂ.60,000 ವೇತನ ನೀಡಲಾಗುವುದು ಎಂದು ಇಲಾಖೆ ತಿಳಿಸಿದೆ.

ಈ ನೇಮಕಾತಿ ಪ್ರಕ್ರಿಯೆಯು ಜಿಲ್ಲೆಯ ಆರೋಗ್ಯ ಸಂಸ್ಥೆಗಳಲ್ಲಿ ವೈದ್ಯರ ಕೊರತೆಯನ್ನು ನೀಗಿಸಿ ತುರ್ತು ಹಾಗೂ ಸಾಮಾನ್ಯ ವೈದ್ಯಕೀಯ ಸೇವೆಗಳನ್ನು ಬಲಪಡಿಸಲು ಸಹಾಯಕವಾಗಲಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಅಥವಾ 9449843052 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande