ಶಿರಹಟ್ಟಿ ಪುನರ್ವಸತಿ ಕೇಂದ್ರದಲ್ಲಿ ಅನಧಿಕೃತ ಆಕ್ರಮಣ ತೆರವಿಗೆ ಸೂಚನೆ
ಬಾಗಲಕೋಟೆ, 12 ಜೂನ್ (ಹಿ.ಸ.) : ಆಂಕರ್ : ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ವ್ಯಾಪ್ತಿಯ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶಿರಹಟ್ಟಿ ಪುನರ್ವಸತಿ ಕೇಂದ್ರದಲ್ಲಿ ಅನಧಿಕೃತವಾಗಿ ಜಾಗವನ್ನು ಆಕ್ರಮಿಸಿಕೊಂಡಿರುವ ಸಾರ್ವಜನಿಕರಿಗೆ ಸ್ಥಳ ತೆರವುಗೊಳಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಮ
ತೆರವು


ಬಾಗಲಕೋಟೆ, 12 ಜೂನ್ (ಹಿ.ಸ.) :

ಆಂಕರ್ : ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ವ್ಯಾಪ್ತಿಯ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ

ಶಿರಹಟ್ಟಿ ಪುನರ್ವಸತಿ ಕೇಂದ್ರದಲ್ಲಿ ಅನಧಿಕೃತವಾಗಿ ಜಾಗವನ್ನು ಆಕ್ರಮಿಸಿಕೊಂಡಿರುವ ಸಾರ್ವಜನಿಕರಿಗೆ ಸ್ಥಳ ತೆರವುಗೊಳಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಮಾನ್ಯ ವಿಶೇಷ ಜಿಲ್ಲಾಧಿಕಾರಿಗಳು (ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ನಿರ್ಮಾಣ, ಕೃಷ್ಣಾ ಮೇಲ್ದಂಡೆ ಯೋಜನೆ), ಜಮಖಂಡಿ ಅವರ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಯಿತು. ಈ ವೇಳೆ ಎಇಇ ನಂ.8, ಪುನರ್ವಸತಿ ಅಧಿಕಾರಿಗಳ ಕಾರ್ಯಾಲಯ ಜಮಖಂಡಿ ಕಚೇರಿಯ ಸಿಬ್ಬಂದಿ ವರ್ಗದವರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿ.ಡಿ.ಓ.) ಅವರ ಸಹಯೋಗದೊಂದಿಗೆ ಶಿರಹಟ್ಟಿ ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

ಪುನರ್ವಸತಿ ಕೇಂದ್ರದ ವ್ಯಾಪ್ತಿಯಲ್ಲಿನ ಸರ್ಕಾರಿ ಜಾಗವನ್ನು ಯಾವುದೇ ಅನುಮತಿ ಇಲ್ಲದೆ ಆಕ್ರಮಿಸಿಕೊಂಡಿರುವ ಸಾರ್ವಜನಿಕರಿಗೆ, ನಿಯಮಾನುಸಾರ ಜಾಗವನ್ನು ಖಾಲಿ ಮಾಡಿ ಇಲಾಖೆಗೆ ಸಹಕರಿಸುವಂತೆ ಅಧಿಕಾರಿಗಳು ಸೂಚಿಸಿದರು.

ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಭೂಸ್ವಾಧೀನ ಹಾಗೂ ಪುನರ್ವಸತಿ ಕಾರ್ಯಗಳು ಸರ್ಕಾರದ ನಿಯಮಾನುಸಾರ ನಡೆಯುತ್ತಿದ್ದು, ಪುನರ್ವಸತಿ ಕೇಂದ್ರಗಳಲ್ಲಿನ ಜಾಗಗಳ ಸಂರಕ್ಷಣೆ ಮತ್ತು ಸಮರ್ಪಕ ಬಳಕೆಗೆ ಇಲಾಖೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.

ಅನಧಿಕೃತ ಒತ್ತುವರಿಯಿಂದ ಸಾರ್ವಜನಿಕ ಉದ್ದೇಶದ ಕಾಮಗಾರಿಗಳಿಗೆ ಹಾಗೂ ಪುನರ್ವಸತಿ ವ್ಯವಸ್ಥೆಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರು ಕಾನೂನುಬದ್ಧ ನಿಯಮಗಳನ್ನು ಪಾಲಿಸಿ, ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.

ಅಧಿಕೃತ ಅನುಮತಿ ಇಲ್ಲದೆ ಸರ್ಕಾರಿ ಜಾಗವನ್ನು ಬಳಸುವುದು ಅಥವಾ ಆಕ್ರಮಿಸಿಕೊಳ್ಳುವುದು ಕಾನೂನುಬಾಹಿರವಾಗಿದ್ದು, ಮುಂದಿನ ದಿನಗಳಲ್ಲಿ ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande