ಶಕುಂತಲಾ ಕುರ್ತಕೋಟಿ ಜನ್ಮಶತಮಾನೋತ್ಸವ ಸ್ಮರಣಾರ್ಥ ಸಸಿ ನೆಡುವ ಅಭಿಯಾನ
ಧಾರವಾಡ, 12 ಜೂನ್ (ಹಿ.ಸ.) : ಆ್ಯಂಕರ್ : ವಿಶ್ವ ಪರಿಸರ ದಿನಾಚರಣೆ ಹಾಗೂ ಶ್ರೀಮತಿ ಶಕುಂತಲಾ ಕುರ್ತಕೋಟಿ ಜನ್ಮಶತಮಾನೋತ್ಸವದ ಸ್ಮರಣಾರ್ಥ ಹಮ್ಮಿಕೊಂಡಿರುವ ಸಸಿ ನೆಡುವ ಅಭಿಯಾನದ ಮುಂದುವರಿದ ಭಾಗವಾಗಿ, ಪರಿಸರಕ್ಕಾಗಿ ನಾವು ಸಂಘಟನೆ, ಗಾಂಧಿ ಶಾಂತಿ ಪ್ರತಿಷ್ಠಾನ ಕೇಂದ್ರ ಹಾಗೂ ಶಿರಡಿ ಸಾಯಿ ಬಾಬಾ ಕಾಲೊನ
Campaign


ಧಾರವಾಡ, 12 ಜೂನ್ (ಹಿ.ಸ.) :

ಆ್ಯಂಕರ್ : ವಿಶ್ವ ಪರಿಸರ ದಿನಾಚರಣೆ ಹಾಗೂ ಶ್ರೀಮತಿ ಶಕುಂತಲಾ ಕುರ್ತಕೋಟಿ ಜನ್ಮಶತಮಾನೋತ್ಸವದ ಸ್ಮರಣಾರ್ಥ ಹಮ್ಮಿಕೊಂಡಿರುವ ಸಸಿ ನೆಡುವ ಅಭಿಯಾನದ ಮುಂದುವರಿದ ಭಾಗವಾಗಿ, ಪರಿಸರಕ್ಕಾಗಿ ನಾವು ಸಂಘಟನೆ, ಗಾಂಧಿ ಶಾಂತಿ ಪ್ರತಿಷ್ಠಾನ ಕೇಂದ್ರ ಹಾಗೂ ಶಿರಡಿ ಸಾಯಿ ಬಾಬಾ ಕಾಲೊನಿ ನಿವಾಸಿಗಳ ಕಲ್ಯಾಣ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಧಾರವಾಡ ಸಾಧನಕೇರಿಯ ಶಿರಡಿ ಸಾಯಿ ಬಾಬಾ ಕಾಲೊನಿ ಮತ್ತು ಉದಯನಗರ ಉದ್ಯಾನವನದಲ್ಲಿ ಸಸಿ ನೆಡುವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಸಂಪಿಗೆ, ಬೆಂಗಾಲಿ ಸೇರಿದಂತೆ ವಿವಿಧ ಜಾತಿಯ ಸಸಿಗಳನ್ನು ನೆಡಲಾಯಿತು. ಪರಿಸರ ಸಂರಕ್ಷಣೆ, ಹಸಿರು ವಾತಾವರಣದ ವೃದ್ಧಿ ಹಾಗೂ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಳಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಸ್ಥಳೀಯ ನಿವಾಸಿಗಳು, ಪರಿಸರ ಪ್ರೇಮಿಗಳು ಹಾಗೂ ಸಂಘಟನೆಯ ಪದಾಧಿಕಾರಿಗಳು ಸಕ್ರಿಯವಾಗಿ ಭಾಗವಹಿಸಿದರು.

ಒಂದು ಸಸಿ ನೆಡುವುದು ಎಂದರೆ ಒಂದು ಜೀವವನ್ನು ಬೆಳೆಸಿದಂತೆ ಎಂಬ ಸಂದೇಶದೊಂದಿಗೆ ನಡೆದ ಈ ಅಭಿಯಾನವು ಪರಿಸರ ಜಾಗೃತಿ ಮೂಡಿಸುವಲ್ಲಿ ಮಹತ್ವದ ಹೆಜ್ಜೆಯಾಗಿ ಪರಿಣಮಿಸಿತು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande