ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ತಮಿಳು ನಾಡು ಮುಖ್ಯಮಂತ್ರಿ ವಿಜಯ್ ಭೇಟಿ
ಉಡುಪಿ, 12 ಜೂನ್ (ಹಿ.ಸ.) : ಆ್ಯಂಕರ್ : ತಮಿಳು ನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಇಂದು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ, ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಿಗೆ ಭಕ್ತಿಪೂರ್ವಕವಾಗಿ ಬೆಳ್ಳಿಯ ಖಡ್ಗವನ್ನು ಅರ್ಪಿಸಿದರು. ಇದಕ್ಕ
Tn cm kolluru


ಉಡುಪಿ, 12 ಜೂನ್ (ಹಿ.ಸ.) :

ಆ್ಯಂಕರ್ : ತಮಿಳು ನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಇಂದು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ, ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಿಗೆ ಭಕ್ತಿಪೂರ್ವಕವಾಗಿ ಬೆಳ್ಳಿಯ ಖಡ್ಗವನ್ನು ಅರ್ಪಿಸಿದರು.

ಇದಕ್ಕೂ ಮುನ್ನ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು, ಅಲ್ಲಿಂದ ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ಪ್ರಯಾಣ ಬೆಳೆಸಿದರು. ದೇವಾಲಯಕ್ಕೆ ಆಗಮಿಸಿದ ಅವರನ್ನು ದೇವಾಲಯದ ವ್ಯವಸ್ಥಾಪನಾ ಮಂಡಳಿಯ ಪದಾಧಿಕಾರಿಗಳು ಆತ್ಮೀಯವಾಗಿ ಸ್ವಾಗತಿಸಿದರು.

ಬಳಿಕ ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದ ವಿಜಯ್ ಅವರು ವಿಶೇಷ ಪೂಜೆಯಲ್ಲಿ ಭಾಗವಹಿಸಿ ಆಶೀರ್ವಾದ ಪಡೆದರು. ದೇವರ ದರ್ಶನದ ಸಂದರ್ಭದಲ್ಲಿ ಭಕ್ತರ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿತ್ತು.

ವಿಜಯ್ ಅವರ ಭೇಟಿಯ ಹಿನ್ನೆಲೆಯಲ್ಲಿ ದೇವಾಲಯದ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಭದ್ರತಾ ದೃಷ್ಟಿಯಿಂದ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು, ದೇವಾಲಯಕ್ಕೆ ಆಗಮಿಸುವ ಪ್ರಮುಖ ಮಾರ್ಗಗಳಲ್ಲಿಯೂ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು.

ವಿಜಯ್ ಅವರ ಆಗಮನದ ಸುದ್ದಿ ತಿಳಿದ ನೂರಾರು ಅಭಿಮಾನಿಗಳು ಮತ್ತು ಭಕ್ತರು ದೇವಾಲಯದ ಆವರಣದಲ್ಲಿ ನೆರೆದಿದ್ದರು. ತಮ್ಮ ನೆಚ್ಚಿನ ನಾಯಕನನ್ನು ಕಂಡ ಅಭಿಮಾನಿಗಳು ಸಂಭ್ರಮ ವ್ಯಕ್ತಪಡಿಸಿದರು. ವಿಜಯ್ ಅವರು ಸಹ ಅಭಿಮಾನಿಗಳತ್ತ ಕೈಬೀಸಿ ಶುಭಾಶಯ ಕೋರಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande