ಜನಸ್ಪಂದನೆಗೆ ಸ್ಪಂದಿಸಿದ ಶಾಸಕ ಉಮೇಶ್ ಮೇಟಿ ; ಸಾರ್ವಜನಿಕರ ಅಹವಾಲು ಆಲಿಸಿ ಶೀಘ್ರ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ
ಬಾಗಲಕೋಟೆ, 12 ಜೂನ್ (ಹಿ.ಸ.) : ಆಂಕರ್ : ಕ್ಷೇತ್ರದ ಜನರೊಂದಿಗೆ ನೇರ ಸಂಪರ್ಕದಲ್ಲಿದ್ದು, ಅವರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಬಾಗಲಕೋಟೆ ಶಾಸಕ ಉಮೇಶ್ ಮೇಟಿ ಅವರು ಇಂದು ಬಾಗಲಕೋಟೆಯ ಶಾಸಕರ ಕಚೇರಿ ಹಾಗೂ ತಮ್ಮ ಸ್ವಗ್ರಾಮ ತಿಮ್ಮಾಪುರದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ ಜನಸ್ಪಂದನೆ ಕಾರ್ಯಕ್
ಅಹವಾಲು


ಬಾಗಲಕೋಟೆ, 12 ಜೂನ್ (ಹಿ.ಸ.) :

ಆಂಕರ್ : ಕ್ಷೇತ್ರದ ಜನರೊಂದಿಗೆ ನೇರ ಸಂಪರ್ಕದಲ್ಲಿದ್ದು, ಅವರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಬಾಗಲಕೋಟೆ ಶಾಸಕ ಉಮೇಶ್ ಮೇಟಿ ಅವರು ಇಂದು ಬಾಗಲಕೋಟೆಯ ಶಾಸಕರ ಕಚೇರಿ ಹಾಗೂ ತಮ್ಮ ಸ್ವಗ್ರಾಮ ತಿಮ್ಮಾಪುರದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ ಜನಸ್ಪಂದನೆ ಕಾರ್ಯಕ್ರಮ ನಡೆಸಿದರು.

ಈ ಸಂದರ್ಭದಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಕಾರ್ಯಕರ್ತರು, ಸಾರ್ವಜನಿಕರು ತಮ್ಮ ವೈಯಕ್ತಿಕ ಸಮಸ್ಯೆಗಳು, ಗ್ರಾಮಗಳ ಅಭಿವೃದ್ಧಿಗೆ ಸಂಬಂಧಿಸಿದ ಬೇಡಿಕೆಗಳು ಹಾಗೂ ವಿವಿಧ ಸಾರ್ವಜನಿಕ ಹಿತಾಸಕ್ತಿಯ ಮನವಿಗಳನ್ನು ಶಾಸಕರಿಗೆ ಸಲ್ಲಿಸಿದರು. ಸಾರ್ವಜನಿಕರಿಂದ ಸ್ವೀಕರಿಸಲಾದ ಅಹವಾಲುಗಳನ್ನು ಆಲಿಸಿದ ಶಾಸಕ ಉಮೇಶ್ ಮೇಟಿ ಅವರು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವಂತೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಆಲಿಸಿ ಪರಿಹಾರದ ದಿಕ್ಕಿನಲ್ಲಿ ಕ್ರಮ ಕೈಗೊಳ್ಳುವುದು ತಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ತಿಳಿಸಿದ ಅವರು, ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಜನರ ಕಲ್ಯಾಣಕ್ಕಾಗಿ ನಿರಂತರವಾಗಿ ಕಾರ್ಯನಿರ್ವಹಿಸುವುದಾಗಿ ಹೇಳಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘದಿಂದ ಸನ್ಮಾನ

ಇದೇ ವೇಳೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ, ಬಾಗಲಕೋಟೆ ವತಿಯಿಂದ ಶಾಸಕ ಉಮೇಶ್ ಮೇಟಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ನೀಡಿದ ಗೌರವಕ್ಕೆ ಶಾಸಕರು ಕೃತಜ್ಞತೆ ಸಲ್ಲಿಸಿ, ಸಾರ್ವಜನಿಕ ಸೇವೆಯಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಹಕಾರ ಮಹತ್ವದ್ದಾಗಿದೆ ಎಂದು ಹೇಳಿದರು.

ಹೊಸ ಕಾರು ಖರೀದಿಸಿದ ಈರಣ್ಣ ಗುಳೇದ ಅವರಿಗೆ ಶುಭಾಶಯ

ಇದರೊಂದಿಗೆ ಆತ್ಮೀಯರಾದ ಈರಣ್ಣ ಗುಳೇದ ಅವರು ಹೊಸ ಕಾರು ಖರೀದಿಸಿದ ಹಿನ್ನೆಲೆಯಲ್ಲಿ ಅವರನ್ನು ಭೇಟಿ ಮಾಡಿದ ಶಾಸಕ ಉಮೇಶ್ ಮೇಟಿ ಅವರು ಶುಭಾಶಯಗಳನ್ನು ಕೋರಿದರು. ಅವರ ಜೀವನದಲ್ಲಿ ಇನ್ನಷ್ಟು ಯಶಸ್ಸು, ಸುಖ, ಸಮೃದ್ಧಿ ಹಾಗೂ ಪ್ರಗತಿ ದೊರೆಯಲಿ ಎಂದು ಹಾರೈಸಿದರು.

ಜನರೊಂದಿಗೆ ಸದಾ ಬೆರೆತು, ಅವರ ಆಶೋತ್ತರಗಳಿಗೆ ಸ್ಪಂದಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಬದ್ಧರಾಗಿರುವುದಾಗಿ ಶಾಸಕ ಉಮೇಶ್ ಮೇಟಿ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande