
ವಿಜಯಪುರ, 13 ಜೂನ್ (ಹಿ.ಸ.) :
ಆಂಕರ್ : ವಿಜಯಪುರ ಜಿಲ್ಲೆಯ
ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ 12 ವರ್ಷಗಳ ಜನಸೇವಾ ಆಡಳಿತ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸ್ಮರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ದೇಶದ ಅಭಿವೃದ್ಧಿ, ಜನಕಲ್ಯಾಣ ಯೋಜನೆಗಳು, ಮೂಲಸೌಕರ್ಯ ವೃದ್ಧಿ ಹಾಗೂ ಜಾಗತಿಕ ಮಟ್ಟದಲ್ಲಿ ಭಾರತದ ಗೌರವವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಕೈಗೊಂಡಿರುವ ವಿವಿಧ ಕಾರ್ಯಗಳನ್ನು ಕಾರ್ಯಕ್ರಮದಲ್ಲಿ ವಿವರಿಸಲಾಯಿತು.
ಈ ಸಂದರ್ಭದಲ್ಲಿ ವಿಜಯಪುರ ಲೋಕಸಭಾ ಕ್ಷೇತ್ರದ ಸಂಸದ ರಮೇಶ ಜಿಗಜಿಣಗಿ, ಸೋಮನಗೌಡ ಪಾಟೀಲ, ಮಂಡಲ ಅಧ್ಯಕ್ಷ ಅವ್ವಾಣ ಗ್ವಾತಗಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಪಕ್ಷದ ಕಾರ್ಯಕರ್ತರಾದ ವೀರಣ್ಣ ರಾವುರ, ಅನೀಲ ಜಮಾದಾರ, ಸಿದ್ದು ಬುಳ್ಳಾ, ಮಂಜುನಾಥ ಭಿಸೆ, ರಮೇಶ ಮಸಿಬಿನಾಳ ಹಾಗೂ ಅನೇಕ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮದ ವೇಳೆ ದೇಶದ ಏಕತೆ, ಅಭಿವೃದ್ಧಿ ಹಾಗೂ ಜನಸೇವೆಯ ಸಂಕಲ್ಪವನ್ನು ಮುಂದುವರಿಸುವ ಕುರಿತು ಚರ್ಚಿಸಲಾಯಿತು. ಇದೇ ಸಂದರ್ಭದಲ್ಲಿ ತಾಯಿ ಭಾರತ ಮಾತೆಗೆ ಗೌರವ ಸಲ್ಲಿಸಿ ಎರಡು ನುಡಿ ನಮನಗಳನ್ನು ಅರ್ಪಿಸಲಾಯಿತು.
ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶವು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿಯೂ ಜನಪರ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ಸಂಕಲ್ಪವನ್ನು ಮುಖಂಡರು ವ್ಯಕ್ತಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande