ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಚಾಲನೆ
ತುಮಕೂರು, 13 ಜೂನ್ (ಹಿ.ಸ.) : ಆ್ಯಂಕರ್ : ತುಮಕೂರು ಲೋಕ ಸಭಾ ಕ್ಷೇತ್ರದ ಕೊರಟಗೆರೆ ತಾಲ್ಲೂಕಿನ ಎಲೆರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಪಾಳ್ಯ ಗ್ರಾಮದಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅನುದಾನದಡಿ ನಿರ್ಮಾಣವಾಗಲಿರುವ ಶುದ್ಧ ಕುಡಿಯುವ ನೀರಿನ ಘಟಕದ ಕಾಮಗಾರಿಗೆ ಕೇಂದ್ರ ಸಚಿವ ವಿ
ಶಂಕುಸ್ಥಾಪನೆ


ತುಮಕೂರು, 13 ಜೂನ್ (ಹಿ.ಸ.) :

ಆ್ಯಂಕರ್ : ತುಮಕೂರು ಲೋಕ ಸಭಾ ಕ್ಷೇತ್ರದ ಕೊರಟಗೆರೆ ತಾಲ್ಲೂಕಿನ ಎಲೆರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಪಾಳ್ಯ ಗ್ರಾಮದಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅನುದಾನದಡಿ ನಿರ್ಮಾಣವಾಗಲಿರುವ ಶುದ್ಧ ಕುಡಿಯುವ ನೀರಿನ ಘಟಕದ ಕಾಮಗಾರಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಇದರ ಮೂಲಕ ಹೊಸಪಾಳ್ಯ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳಿಗೆ ಅನುಕೂಲವಾಗಲಿದೆ. ಯೋಜನೆ ಪೂರ್ಣಗೊಂಡ ಬಳಿಕ ಗ್ರಾಮಸ್ಥರಿಗೆ ಗುಣಮಟ್ಟದ ಕುಡಿಯುವ ನೀರು ಲಭ್ಯವಾಗುವ ನಿರೀಕ್ಷೆಯಿದೆ.

ಕಾರ್ಯಕ್ರಮದಲ್ಲಿ ಸ್ಥಳೀಯ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ನಡೆಸಿದ ಸಚಿವರು, ಜನರ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು, ರಸ್ತೆ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮುಖಂಡರಾದ ಅನಿಲ್ ಕುಮಾರ್, ಹುಚ್ಚಯ್ಯ, ರುದ್ರೇಶ್, ದರ್ಶನ್ ಸೇರಿದಂತೆ ಹೊಸಪಾಳ್ಯ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande