ಉತ್ತಮ ಶಿಕ್ಷಣಕ್ಕೆ ಸರ್ಕಾರದ ಬದ್ಧತೆ : ಮುಖ್ಯಮಂತ್ರಿ
ಬೆಂಗಳೂರು, 13 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಮತ್ತು ಉತ್ತಮ ಶಿಕ್ಷಣ ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಶಾಲಾ ಶೈಕ್ಷಣಿಕ ವರ್ಷ
Meeting


ಬೆಂಗಳೂರು, 13 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಮತ್ತು ಉತ್ತಮ ಶಿಕ್ಷಣ ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಶಾಲಾ ಶೈಕ್ಷಣಿಕ ವರ್ಷ 2026-27ರ ಆರಂಭದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರು ಇಂದು ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ರಾಜ್ಯದ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವುದು, ವಿದ್ಯಾರ್ಥಿಗಳ ಆರೋಗ್ಯ ರಕ್ಷಣೆ, ಪೌಷ್ಟಿಕಾಂಶ, ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಯಿತು.

ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವುದರ ಜೊತೆಗೆ, ಶಾಲಾ ಶಿಕ್ಷಣದ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದರು. ಮಕ್ಕಳ ಆರೋಗ್ಯ ಮತ್ತು ಕಲ್ಯಾಣದ ಕಡೆಗೂ ವಿಶೇಷ ಗಮನ ಹರಿಸುವಂತೆ ತಿಳಿಸಿದರು.

ಸಭೆಯಲ್ಲಿ ಸಚಿವರಾದ ಯು. ಟಿ. ಖಾದರ್, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯದ ಪ್ರತಿಯೊಬ್ಬ ವಿದ್ಯಾರ್ಥಿಗೂ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಸರ್ಕಾರ ಬದ್ಧವಾಗಿದ್ದು, ಶಿಕ್ಷಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಿರಂತರವಾಗಿ ಕೆಲಸ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande