ಜೂನ್ 21 - ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಕೊಪ್ಪಳ, 13 ಜೂನ್ (ಹಿ.ಸ.) : ಆ್ಯಂಕರ್ : ಜಿಲ್ಲಾ ಆಯುಷ್ ಇಲಾಖೆ ವತಿಯಿಂದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ-2026ರ ಅಂಗವಾಗಿ ಜಿಲ್ಲಾ ಮಟ್ಟದ ಯೋಗ ಮತ್ತು ಜಾಥಾ ವನ್ನು ಜಿಲ್ಲಾ ಕೇಂದ್ರದಲ್ಲಿ ಆಯೋಜಿಸಲಾಗಿದೆ. ``ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ'''' ಎಂಬ ಘೋಷವಾಕ್ಯದೊಂದಿಗೆ 12ನೇ ಅಂತಾರಾಷ
ಜೂನ್ 21 - ಅಂತಾರಾಷ್ಟ್ರೀಯ ಯೋಗ ದಿನಾಚರಣೆ


ಕೊಪ್ಪಳ, 13 ಜೂನ್ (ಹಿ.ಸ.) :

ಆ್ಯಂಕರ್ : ಜಿಲ್ಲಾ ಆಯುಷ್ ಇಲಾಖೆ ವತಿಯಿಂದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ-2026ರ ಅಂಗವಾಗಿ ಜಿಲ್ಲಾ ಮಟ್ಟದ ಯೋಗ ಮತ್ತು ಜಾಥಾ ವನ್ನು ಜಿಲ್ಲಾ ಕೇಂದ್ರದಲ್ಲಿ ಆಯೋಜಿಸಲಾಗಿದೆ.

``ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ'' ಎಂಬ ಘೋಷವಾಕ್ಯದೊಂದಿಗೆ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲು ಆಯುಷ್ ಮಂತ್ರಾಲಯವು ನಿರ್ಧರಿಸಿದೆ. ಜೂನ್ 21ರ ಬೆಳಿಗ್ಗೆ 6.30 ಗಂಟೆಗೆ ಕೊಪ್ಪಳ ತಾಲೂಕಾ ಕ್ರೀಡಾಂಗಣದ ಆವರಣದಲ್ಲಿ ಯೋಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಪೂರ್ವಭಾವಿಯಾಗಿ ಜೂನ್ 20ರ ಸಾಯಂಕಾಲ 4 ಗಂಟೆಯಿಂದ 6 ಗಂಟೆಯವರೆಗೆ ಯೋಗ ಜಾಥಾವನ್ನು ಆಯೋಜಿಸಲಾಗಿದ್ದು, ಯೋಗಜಾಥಾವು ಶ್ರೀ ಗವಿಮಠದ ಆವರಣದಿಂದ ಪ್ರಾರಂಭವಾಗಿ ಗಡಿಯಾರ ಕಂಬ ಹಾಗೂ ಅಶೋಕ ಸರ್ಕಲ್ ಮೂಲಕ ತಾಲೂಕಾ ಕ್ರೀಡಾಂಗಣದ ವರೆಗೆ ನಡೆಯಲಿದೆ.

ಜೂನ್ 21ರ ಬೆಳಿಗ್ಗೆ 6.30 ಗಂಟೆಗೆ ತಾಲೂಕಾ ಕ್ರೀಡಾಂಗಣದ ಆವರಣದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಯೋಗ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಇಲಾಖಾಧಿಕಾರಿಗಳು, ಸಿಬ್ಬಂದಿ, ಸರ್ವ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕೊಪ್ಪಳ ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ. ಪರ್ವತಗೌಡ ಬ. ಹಿರೇಗೌಡರ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande