ಕೊಪ್ಪಳ : ದಂಡ ಬಾಕಿಗೆ ಶೇ.50 ವಿನಾಯತಿ
ಕೊಪ್ಪಳ, 13 ಜೂನ್ (ಹಿ.ಸ.) : ಆ್ಯಂಕರ್ : ಸಾರಿಗೆ ಇಲಾಖೆಯ ದಂಡ ಬಾಕಿ ಪ್ರಕರಣಗಳಿಗೆ ಶೇ.50ರ ವಿನಾಯತಿಯನ್ನು ನೀಡಲಾಗಿದೆ ಎಂದು ಕೊಪ್ಪಳ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಕೆ.ದಾಮೋದರ್ ಅವರು ತಿಳಿಸಿದ್ದಾರೆ. ಸರ್ಕಾರದ ಆದೇಶದಂತೆ ಕರ್ನಾಟಕ ರಾಜ್ಯದ ಸಾರಿಗೆ ಇಲಾಖೆಯಲ್ಲಿ 1991-1992 ರಿಂದ 2021-202
ಕೊಪ್ಪಳ : ದಂಡ ಬಾಕಿಗೆ ಶೇ.50 ವಿನಾಯತಿ


ಕೊಪ್ಪಳ, 13 ಜೂನ್ (ಹಿ.ಸ.) :

ಆ್ಯಂಕರ್ : ಸಾರಿಗೆ ಇಲಾಖೆಯ ದಂಡ ಬಾಕಿ ಪ್ರಕರಣಗಳಿಗೆ ಶೇ.50ರ ವಿನಾಯತಿಯನ್ನು ನೀಡಲಾಗಿದೆ ಎಂದು ಕೊಪ್ಪಳ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಕೆ.ದಾಮೋದರ್ ಅವರು ತಿಳಿಸಿದ್ದಾರೆ.

ಸರ್ಕಾರದ ಆದೇಶದಂತೆ ಕರ್ನಾಟಕ ರಾಜ್ಯದ ಸಾರಿಗೆ ಇಲಾಖೆಯಲ್ಲಿ 1991-1992 ರಿಂದ 2021-2022ರ ಅವಧಿಯಲ್ಲಿ ಮೋಟಾರು ವಾಹನ ಕಾಯ್ದೆ, ನಿಯಮಗಳ ಉಲ್ಲಂಘನೆ ಸಂಬಂದ ದಾಖಲಾಗಿ ಬಾಕಿ ಉಳಿದಿರುವ ಡಿ.ಎಸ್.ಎ. (ಇಲಾಖಾ ಶಾಸನ ಬದ್ದ) ಪ್ರಕರಣಗಳ ದಂಡದ ಮೊತ್ತದಲ್ಲಿ 50% (ಶೇಕಡಾ ಐವತ್ತರಷ್ಟು ಮಾತ್ರ) ರಷ್ಟು ರಿಯಾಯತಿಯನ್ನು ಇದೇ ಜೂನ್ 21 ರಿಂದ ಜುಲೈ 10ರ ವರೆಗೆ (20 ದಿನಗಳವರೆಗೆ) ಕಾಲಾವಕಾಶವನ್ನು ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ. ವಾಹನ ಮಾಲೀಕರು, ಚಾಲಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕೊಪ್ಪಳ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಾರ್ಯಾಲಯ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande