ಉಡುಪಿ ಮಾರಿಗುಡಿ ದೇವಸ್ಥಾನಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ
ಉಡುಪಿ, 13 ಜೂನ್ (ಹಿ.ಸ.) : ಆ್ಯಂಕರ್ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಡುಪಿ ಜಿಲ್ಲೆಯ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನಕ್ಕೆ ಆಗಮಿಸಿದ ಸಚಿವೆ ಅವರು ದೇವರ ದರ್ಶನ ಪಡೆದು, ರಾಜ್ಯ ಹಾಗೂ ದೇಶದ ಜನರ ಸುಖ, ಸಮೃದ್ಧಿ ಮತ್ತು ಕಲ್ಯಾಣ
Nirmala Sitharaman visits Udupi Marigudi temple


ಉಡುಪಿ, 13 ಜೂನ್ (ಹಿ.ಸ.) :

ಆ್ಯಂಕರ್ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಡುಪಿ ಜಿಲ್ಲೆಯ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ದೇವಸ್ಥಾನಕ್ಕೆ ಆಗಮಿಸಿದ ಸಚಿವೆ ಅವರು ದೇವರ ದರ್ಶನ ಪಡೆದು, ರಾಜ್ಯ ಹಾಗೂ ದೇಶದ ಜನರ ಸುಖ, ಸಮೃದ್ಧಿ ಮತ್ತು ಕಲ್ಯಾಣಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಅವರಿಗೆ ಸಾಂಪ್ರದಾಯಿಕವಾಗಿ ಸ್ವಾಗತ ಕೋರಲಾಯಿತು.

ಭೇಟಿಯ ವೇಳೆ ದೇವಸ್ಥಾನದ ಧಾರ್ಮಿಕ ಹಾಗೂ ಐತಿಹಾಸಿಕ ಮಹತ್ವದ ಕುರಿತು ಮಾಹಿತಿ ಪಡೆದುಕೊಂಡ ಸಚಿವೆ, ದೇವಾಲಯದ ಅಭಿವೃದ್ಧಿ ಕಾರ್ಯಗಳ ಬಗ್ಗೆಯೂ ಆಸಕ್ತಿ ತೋರಿದರು. ಭಕ್ತರೊಂದಿಗೆ ಕೆಲಕಾಲ ಸಂವಾದ ನಡೆಸಿದ ಅವರು ದೇವಸ್ಥಾನದ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಭಕ್ತರು ಉಪಸ್ಥಿತರಿದ್ದರು. ಕೇಂದ್ರ ಸಚಿವೆಯರ ಭೇಟಿ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ವಿಶೇಷ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿತ್ತು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande