ಸಂತ್ರಸ್ತರ ಪ್ರಶ್ನೆಗೆ ಬಿಟಿಡಿಎ ಅಧ್ಯಕ್ಷರ ಉತ್ತರದಿಂದ ವಾಗ್ವಾದ
ಬಾಗಲಕೋಟೆ, 13 ಜೂನ್ (ಹಿ.ಸ.) : ಆಂಕರ್ : ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ (BTDA) ಕಚೇರಿಯಲ್ಲಿ ನಡೆದ ಸಂತ್ರಸ್ತರಿಗೆ ಹಕ್ಕು ಪತ್ರ ಹಾಗೂ ಇ-ಖಾತಾ ಉತಾರೆ ವಿತರಣೆ ಕಾರ್ಯಕ್ರಮದಲ್ಲಿ ಬಿಟಿಡಿಎ ಅಧ್ಯಕ್ಷ ಪ್ರಕಾಶ ತಪಶೆಟ್ಟಿ ಮತ್ತು ಸಂತ್ರಸ್ತರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಕಾರ್ಯ
ಗಲಾಟೆ


ಬಾಗಲಕೋಟೆ, 13 ಜೂನ್ (ಹಿ.ಸ.) :

ಆಂಕರ್ : ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ (BTDA) ಕಚೇರಿಯಲ್ಲಿ ನಡೆದ ಸಂತ್ರಸ್ತರಿಗೆ ಹಕ್ಕು ಪತ್ರ ಹಾಗೂ ಇ-ಖಾತಾ ಉತಾರೆ ವಿತರಣೆ ಕಾರ್ಯಕ್ರಮದಲ್ಲಿ ಬಿಟಿಡಿಎ ಅಧ್ಯಕ್ಷ ಪ್ರಕಾಶ ತಪಶೆಟ್ಟಿ ಮತ್ತು ಸಂತ್ರಸ್ತರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು.

ಕಾರ್ಯಕ್ರಮದ ವೇಳೆ ಸಂತ್ರಸ್ತರೊಬ್ಬರು ತಮ್ಮ ಸಮಸ್ಯೆಗಳ ಕುರಿತು ಪ್ರಶ್ನೆ ಕೇಳಿದಾಗ, “ಬಿಟಿಡಿಎಗೆ ಬಂದ್ರ ಹೊಳಬಸ್ಸು ಶೆಟ್ಟಿಗೆ ಕೇಳ್ರಿ” ಎಂಬ ಮಾತು ಕೇಳಿಬಂದಿದೆ ಎನ್ನಲಾಗಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಸಂತ್ರಸ್ತರು “ಹೊಳಬಸ್ಸು ಶೆಟ್ಟಿ ಯಾರ್ರೀ?” ಎಂದು ಪ್ರಶ್ನಿಸಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕ್ರಮ ಕೈಗೊಳ್ಳಬೇಕು ಎಂದು ಕೆಲವರು ಒತ್ತಾಯಿಸಿದರು. ಪುನರ್ವಸತಿ, ಹಕ್ಕು ಪತ್ರ ಹಾಗೂ ವಿವಿಧ ಸೌಲಭ್ಯಗಳ ಕುರಿತು ಸಂತ್ರಸ್ತರು ತಮ್ಮ ಅಹವಾಲುಗಳನ್ನು ಅಧಿಕಾರಿಗಳ ಮುಂದೆ ಮಂಡಿಸಿದರು.

ಇದೇ ಸಂದರ್ಭದಲ್ಲಿ ಬಿಟಿಡಿಎಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಉಮೇಶ ಮೇಟಿ ಅವರು ಸಂತ್ರಸ್ತರಿಗೆ ಇ-ಖಾತಾ ಉತಾರೆಗಳನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ಬಿಟಿಡಿಎ ಅಧ್ಯಕ್ಷ ಪ್ರಕಾಶ ತಪಶೆಟ್ಟಿ ಸೇರಿದಂತೆ ಅಧಿಕಾರಿಗಳು ಹಾಗೂ ಸಂತ್ರಸ್ತ ಕುಟುಂಬಗಳ ಸದಸ್ಯರು ಉಪಸ್ಥಿತರಿದ್ದರು.

ಸಂತ್ರಸ್ತರಿಗೆ ಅಗತ್ಯ ದಾಖಲೆಗಳನ್ನು ಒದಗಿಸುವ ಮೂಲಕ ಅವರ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande