
ಧಾರವಾಡ, 14 ಜೂನ್ (ಹಿ.ಸ.) :
ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಧಾರವಾಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹುಬ್ಬಳ್ಳಿ ಅಂಚಟಗೇರಿಯ ಡಾ|| ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಧಾರವಾಡ ಜಯನಗರದ ಯುವರತ್ನ ಕರಿಯರ್ ಅಕಾಡೆಮಿ ಹತ್ತಿರದಲ್ಲಿರುವ ಮಹಿಳಾ ಪದವಿ ಪೂರ್ವ ಕಾಲೇಜುಗಳಲ್ಲಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡಲು ಖಾಲಿ ಉಳಿದ ಕೇಲವು ಸೀಟುಗಳಿಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಹಾಗೂ ಸೂಕ್ತ ವಿದ್ಯಾರ್ಹತೆವುಳ್ಳ ವಿದ್ಯಾರ್ಥಿಗಳು ಆಫ್ಲೈನ್ ಮೂಲಕ ಜೂನ್ 22, 2026 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0836-2971590, 8310998779, 7337768683 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.